ಕೇರಳ: ಕಾಂಗ್ರೆಸ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ತಿರುವನಂತಪುರಂ, ಜು.21: ಮಹಿಳೆಯೊಬ್ಬರನ್ನು ಅತ್ಯಾಚಾರಗೈದ ಆರೋಪದಲ್ಲಿ ಕೇರಳದ ಕಾಂಗ್ರೆಸ್ ಶಾಸಕ ಎಂ.ವಿನ್ಸೆಂಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ತನ್ನ ಮೇಲೆ ಕಾಂಗ್ರೆಸ್ ಶಾಸಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ 51 ವರ್ಷದ ಮಹಿಳೆ ಬಲರಾಂಪುರಂ ಸಮೀಪ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿನ್ಸೆಂಟ್, ಆರೋಪದ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂದಿದ್ದು, ಈ ಬಗ್ಗೆ ತನಿಖೆ ನಡೆಯಲಿ ಎಂದಿದ್ದಾರೆ. ಇಷ್ಟೇ ಅಲ್ಲದೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂದರ್ಭ ಸ್ಥಳೀಯ ಸಿಪಿಎಂ ನಾಯಕ ಆಕೆಯ ಮನೆಯಲ್ಲಿದ್ದರು ಎಂದಿದ್ದಾರೆ.
ಮಹಿಳೆಯ ಪತಿ ನೀಡಿದ ದೂರಿನಂತೆ ವಿನ್ಸೆಂಟ್ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.
Next Story