ಹಳಿ ತಪ್ಪಿದ ಉತ್ಕಲ್ ಎಕ್ಸ್ ಪ್ರೆಸ್ ರೈಲು: ಹಲವರಿಗೆ ಗಾಯ
ಹೊಸದಿಲ್ಲಿ, ಆ,19: ಪುರಿ-ಹರಿದ್ವಾರ್-ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ನ 6 ಬೋಗಿಗಳು ಹಳಿತಪ್ಪಿದ ಘಟನೆ ಮುಝಫ್ಫರ್ ನಗರದ ಖಟೌಲಿಯಲ್ಲಿ ಶನಿವಾರ ಸಂಭವಿಸಿದೆ.
ಘಟನೆಯಿಂದ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಒಡಿಶಾದ ಪುರಿಯಿಂದ ಹರಿದ್ವಾರಕ್ಕೆ ರೈಲು ಆಗಮಿಸುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ದೌಡಾಯಿಸಿದ್ದಾರೆ.
Next Story