1,000 ವಿದ್ಯಾರ್ಥಿಗಳ ವಿರುದ್ಧ ಎಫ್ ಐಆರ್ ದಾಖಲು
ಬನಾರಸ್ ಹಿಂದೂ ವಿವಿಯಲ್ಲಿ ಹಿಂಸಾಚಾರ
ವಾರಣಾಸಿ, ಸೆ.25: ಬನಾರಸ್ ಹಿಂದೂ ವಿವಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ 1000 ವಿದ್ಯಾರ್ಥಿಗಳ ವಿರುದ್ಧ ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿದ ಕೆಲ ಪೊಲೀಸರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಕ್ಯಾಂಪಸ್ ನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ಲಂಕಾ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್ ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹೊರತಾಗಿ ಕೆಲ ಗುರುತಿಸಲ್ಪಡದ ಪೊಲೀಸರ ವಿರುದ್ಧವೂ ಎಫ್ ಐಆರ್ ದಾಖಲಿಸಲಾಗಿದೆ.
ವಿದ್ಯಾರ್ಥಿನಿಯೊಬ್ಬರನ್ನು ಕಿಡಿಗೇಡಿಗಳು ಚುಡಾಯಿಸಿದ ಘಟನೆಯ ನಂತರ ಬನಾರಸ್ ಹಿಂದೂ ವಿವಿಯಲ್ಲಿ ಪ್ರತಿಭಟನೆ ಆರಂಭಗೊಂಡಿತ್ತು. ಈ ಸಂದರ್ಭ ಪೊಲೀಸರ ಲಾಠಿ ಚಾರ್ಜ್ ನಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರು ಹಾಗೂ ಇಬ್ಬರು ಪತ್ರಕರ್ತರು ಗಾಯಗೊಂಡಿದ್ದರು.
Next Story