ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ರಾಂಚಿ, ಅ.5: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿರುವ ಘಟನೆ ಜಾರ್ಖಂಡ್ನ ಪಲಮು ಜಿಲ್ಲೆಯಲ್ಲಿ ನಡೆದಿದೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು ಪಲಮು ಜಿಲ್ಲೆಯ ಛತ್ತರ್ಪುರ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಇಬ್ಬರು ಅಪ್ರಾಪ್ತ ಸೋದರಿಯರನ್ನು ನೆರೆಮನೆಯ ಮೂವರು ವ್ಯಕ್ತಿಗಳು ಅತ್ಯಾಚಾರಗೈದಿದ್ದಾರೆ ಎಂದು ದೂರು ನೀಡಲಾಗಿದ್ದು ತಕ್ಷಣ ಸ್ಥಳಕ್ಕೆ ಧಾವಿಸಿದ ಡಿಎಸ್ಪಿ ಹಾಗೂ ಛತ್ತರ್ಪುರ ಠಾಣೆಯ ಪೊಲೀಸರು ಸಂತ್ರಸ್ತರನ್ನು ಸದರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story