ಉಡುಪಿ, ಆ.10: ಕಲೆ-ಸಾಹಿತ್ಯ-ಸಂಗೀತಾಸಕ್ತರಾಗಿದ್ದ ಉಡುಪಿಯ ಎ.ಎನ್.ಮಧ್ಯಸ್ಥ ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 57 ವರ್ಷ ಪ್ರಾಯವಾಗಿತ್ತು. ಅವರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ಯಕ್ಷಗಾನ ಕಲಾರಂಗದ ಸದಸ್ಯರಾಗಿದ್ದ ಇವರ ನಿಧನಕ್ಕೆ ಕಲಾರಂಗದ ಅದ್ಯಕ್ಷ ಕೆ.ಗಣೇಶ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ಸೂಚಿಸಿದ್ದಾರೆ.