ಯು. ರಾಮಚಂದ್ರ ಪೈ
ಉಪ್ಪಿನಂಗಡಿ: ಇಲ್ಲಿನ ರಾಮನಗರ ನಿವಾಸಿ ನಿವೃತ್ತ ಶಿಕ್ಷಕ ಯು. ರಾಮಚಂದ್ರ ಪೈ (82) ಅಲ್ಪಕಾಲದ ಅನಾರೋಗ್ಯದಿಂದಾಗಿ ಬುಧವಾರ ಸ್ವಗೃಹದಲ್ಲಿ ನಿಧನರಾದರು.
'ಪೈ ಮಾಸ್ಟರ್' ಎಂದೇ ಜನಜನಿತರಾಗಿದ್ದ ಇವರು, ಉಪ್ಪಿನಂಗಡಿ, ಅಡೆಕ್ಕಲ್ ಮೊದಲಾದೆಡೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ತನ್ನ ಶಿಕ್ಷಕ ವೃತ್ತಿಯೊಂದಿಗೆ ಸಾಮಾಜಿಕ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡಿದ್ದ ಇವರು ಉಪ್ಪಿನಂಗಡಿಯ ಸರಕಾರಿ ಮಾದರಿ ಶಾಲಾ ಹಳೇ ವಿದ್ಯಾರ್ಥಿ ಸಂಘದಲ್ಲಿ 32 ವರ್ಷಗಳ ಕಾಲ ಕಾರ್ಯದರ್ಶಿಯಾಗಿ, ಉಪ್ಪಿನಂಗಡಿಯ ಗಣೇಶೋತ್ಸವ ಸಮಿತಿಯಲ್ಲಿ 18 ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದ ಇವರು, ಶಿಕ್ಷಕ ವೃತ್ತಿಯ ನಿವೃತ್ತಿಯ ನಂತರ ಅಂಚೆ ಇಲಾಖೆಯಲ್ಲಿ ಸಣ್ಣ ಉಳಿತಾಯ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಒರ್ವ ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.
Next Story