ಹಾಜಿರಮ್ಮ
ಉಳ್ಳಾಲ : ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರೂ, ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿಯ ಕಾರ್ಯದರ್ಶಿಯೂ ಆಗಿದ್ದ ದಿ. ಅಲೇಕಳ ಅಬ್ದುಲ್ ಖಾದರ್ ಅವರ ಪತ್ನಿ ಹಾಜಿರಮ್ಮ (69) ಮಂಗಳವಾರ ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ತೊಕ್ಕೊಟ್ಟು ಬಬ್ಬುಕಟ್ಟೆಯ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರು ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story