ಯುವರಾಜ ಆಚಾರ್ಯ
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಪಿಂಚಣಿದಾರರ ಸಂಘದ ಕಾರ್ಯದರ್ಶಿ ಯುವರಾಜ ಆಚಾರ್ಯ (66ವ) ಜು.25(ಶನಿವಾರ) ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಕೃಷಿ ಇಲಾಖೆಯಲ್ಲಿ ಜಲಾನಯನ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಅವರು ನಿವೃತ್ತರಾಗಿದ್ದರು. ಅವರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಮೂಡುಬಿದಿರೆ ತಾಲೂಕು ಪಿಂಚಣಿದಾರರ ಸಂಘದ ಅಧ್ಯಕ್ಷ ಅಂಡಾರು ಗುಣಪಾಲ ಹೆಗ್ಡೆ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story