ಹಾಜಿ ಅಬೂಬಕ್ಕರ್
ಮಂಗಳೂರು, ಜು.27: ‘ಅಬ್ಬು ಹಾಜಿ’ ಎಂದೇ ಚಿರಪರಿಚಿತರಾಗಿದ್ದ ನಗರದ ಬಂದರ್ನ ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಮಾಜಿ ಚೇರ್ಮನ್ ಹಾಜಿ ಅಬೂಬಕ್ಕರ್ (70) ಬಂದರ್ನ ಸ್ವಗೃಹದಲ್ಲಿ ಸೋಮವಾರ ಬೆಳಗ್ಗೆ ನಿಧನರಾದರು.
ಹಾಜಿ ಅಬೂಬಕ್ಕರ್ ಅವರು ಅಡಿಕೆ ವ್ಯಾಪಾರಸ್ಥರಾಗಿದ್ದರು. ಜೊತೆಗೆ ಸಮಾಜ ಸೇವೆಯಲ್ಲೂ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರು ಸಹಿತ ಅಪಾರ ಬಂಧು-ಬಳಗ ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವು ಬಂದರ್ನ ಝೀನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿಯ ವಠಾರದಲ್ಲಿ ಸೋಮವಾರ ರಾತ್ರಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story