ಮುಹಮ್ಮದ್ ಬೆಳ್ಳಾರೆ
ಮಂಗಳೂರು, ಮೇ 20: ಕಂಕನಾಡಿಯ ನಿವಾಸಿ, ಉದ್ಯಮಿ ಮುಹಮ್ಮದ್ ಬೆಳ್ಳಾರೆ (62) ಅಸೌಖ್ಯದಿಂದ ನಿಧನರಾದರು.
ಅವರು ಪತ್ನಿ ಹಾಗೂ ಮೂವರು ಪುತ್ರಿಯರ ಸಹಿತ ಬಂಧು, ಬಳಗವನ್ನು ಅಗಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೂಲತಃ ಬೆಳ್ಳಾರೆಯವರಾಗಿದ್ದ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದು, ಹಲವು ಸಂಘ, ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
Next Story