ಜಮ್ಮು -ಕಾಶ್ಮೀರದಲ್ಲಿ ಎನ್ಕೌಂಟರ್ಗೆ ಓರ್ವ ಉಗ್ರ ಬಲಿ
ಶ್ರೀನಗರ, ಡಿ.14: ಜಮ್ಮು ಮತ್ತು ಕಾಶ್ಮೀರದ ಬಿಜ್ಬೆಹರಾದಲ್ಲಿ ಬುಧವಾರ ಬೆಳಗ್ಗೆ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ಗೆ ಓರ್ವ ಉಗ್ರ ಬಲಿಯಾಗಿದ್ದಾನೆ.
ಎರಡು ಕಡೆಗಳಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಬಿಜ್ಬೆಹಾರ ನಗರದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿದೆ. ಸೊಪಾರೆ ಬೊಮಾಯಿ ಎಂಬಲ್ಲಿ ಉಗ್ರರು ಮನೆಯೊಂದರಲ್ಲಿ ಅಡಗಿ ಕುಳಿತಿದ್ದಾರೆಂದು ಹೇಳಲಾಗಿದ್ದು, ಪೊಲೀಸ್ ಮತ್ತು ಭದ್ರತಾ ಪಡೆಗಳು ಉಗ್ರರನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರಿಸಿದೆ.
Next Story