ತಾಲೂಕು, ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ: ಸಚಿವ ರಹೀಂ ಖಾನ್

ರಾಜ್ಯ ಕ್ರೀಡಾ ಸಚಿವ ರಹೀಂ ಖಾನ್ ‘ವಾರ್ತಾಭಾರತಿ’ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭ ತಮ್ಮ ಇಲಾಖೆಯ ಕಾರ್ಯುಕ್ರಮಗಳ ಬಗ್ಗೆ ಅಭಿಪ್ರಾಯಗಳನ್ನು ಪತ್ರಿಕೆಯೊಂದಿಗೆ ಹಂಚಿಕೊಂಡರು.

ವಾಭಾ: ಒಲಿಂಪಿಕ್ಸ್‌ನಂತಹ ಅಂತರ್‌ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತಕ್ಕಿಂತ ಸಣ್ಣ ದೇಶಗಳು ಉತ್ತಮ ಸಾಧನೆ ತೋರುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡಲು ಸರಕಾರದ ಯೋಜನೆ ಗಳಿವೆಯೆ?

ರಹೀಂ ಖಾನ್:  ಒಲಿಂಪಿಕ್ಸ್ ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕಾದರೆ ಕ್ರೀಡಾಪಟುಗಳಿಗೆ ಅಂತರ್‌ರಾಷ್ಟ್ರೀಯ ಮಟ್ಟದ ಸೌಲಭ್ಯದ ಕ್ರೀಡಾಂಗಣ, ಮೂಲಸೌಕರ್ಯಗಳು ಒದಗಿಸಬೇಕಾಗಿದೆ. ಬೆಂಗಳೂರು ನಗರದಂತಹ ಪ್ರದೇಶವನ್ನು ಬಿಟ್ಟರೆ ರಾಜ್ಯದ ಉಳಿದ ಕಡೆಗಳಲ್ಲಿ ಆ ರೀತಿಯ ಕ್ರೀಡಾ ಸೌಲಭ್ಯಗಳ ಕೊರತೆ ಇದೆ. ಈ ಕೊರತೆ ನೀಗಿಸುವ ನಿಟ್ಟಿನಲ್ಲಿ 2019-20ರ ರಾಜ್ಯ ಬಜೆಟ್‌ನಲ್ಲಿ 500 ಕೋ.ರೂ. ಮೀಸಲಿಡುವಂತೆ ಪ್ರಸ್ತಾವ ಇಡಲಾಗಿದೆ. ಇದಲ್ಲದೆ ಕರಾವಳಿ, ಬೆಂಗಳೂರು, ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸುಸಜ್ಜಿತ ವಿಭಾಗೀಯ ಕ್ರೀಡಾ ಕೇಂದ್ರಗಳನ್ನು ತೆರೆದು ಅಲ್ಲಿ ಅಂತರ್‌ರಾಷ್ಟ್ರೀಯ ಕ್ರೀಡಾಪಟುಗಳಿಗೆ ಸೂಕ್ತವಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ರಾಜ್ಯದ ಕ್ರೀಡಾ ಹಾಸ್ಟೆಲ್‌ಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಇದೆ. ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದಾಗ ಅಲ್ಲಿ ಕ್ರೀಡಾಪಟುಗಳು ಮಣ್ಣಿನ ಕ್ರೀಡಾಂಗಣದಲ್ಲಿ ಆಡುವುದನ್ನು ಗಮನಿಸಿದೆ. ಅದೇ ಆಟಗಾರರು ಉತ್ತಮ, ಕ್ರೀಡಾಂಗಣದ ಸೌಲಭ್ಯವನ್ನು ಒದಗಿಸಿದರೆ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಾಧ್ಯವಾದೀತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು, ಜಿಲ್ಲಾಮಟ್ಟದಲ್ಲಿ ಕ್ರೀಡಾಂಗಣಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.

ವಾಭಾ: ರಾಜ್ಯದ ಅಂತರ್‌ರಾಷ್ಟ್ರೀಯ ಕ್ರೀಡಾಪಟುಗಳಿಗೆ ಯಾವ ರೀತಿಯ ಪ್ರೋತ್ಸಾಹ ನೀಡುವ ಯೋಜನೆ ಹೊಂದಿದ್ದೀರಿ ?

ರಹೀಂ ಖಾನ್: ಅಂತರ್‌ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ನಮ್ಮಲ್ಲಿ ಈಗ ಒಲಿಂಪಿಕ್ಸ್‌ಗಿಂತ ಆರು ತಿಂಗಳ ಮೊದಲು ತರಬೇತಿ ನೀಡಲಾಗುತ್ತದೆ. ಆದರೆ, ವಿದೇಶದಲ್ಲಿ ಕ್ರೀಡಾಳುಗಳಿಗೆ ಎರಡೆರಡು ಕೋಚ್‌ಗಳು ದೀರ್ಘಾವಧಿಯ ತರಬೇತಿ ನೀಡುತ್ತಾರೆ. ಅದೇರೀತಿ ಇಲ್ಲೂ ಉತ್ತಮ ತರಬೇತುದಾರರಿಂದ ಕನಿಷ್ಠ ಎರಡು ವರ್ಷಾವಧಿಯ ತರಬೇತಿ ದೊರೆತಾಗ ಕ್ರೀಡಾಪಟುಗಳಿಂದ ಉತ್ತಮ ಸಾಧನೆ ಸಾಧ್ಯ. ಕ್ರೀಡಾಪಟುಗಳಿಗೆ ಪೌಷ್ಟಿಕ ಆಹಾರ, ತರಬೇತಿ ಇರುವ ಹಾಸ್ಟೆಲ್‌ಗಳನ್ನು ಒದಗಿಸಿಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಸಮ್ಮಿಶ್ರ ಸರಕಾರ ಕ್ರೀಡಾ ಸಾಧಕರಿಗೆ ಪೋತ್ಸಾಹಧನ ನೀಡಲು 5 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಿದೆ. ಕ್ರೀಡಾ ವಿಶ್ವವಿದ್ಯಾನಿಲಯವನ್ನು ಆರಂಭಿಸುವ ಉದ್ದೇಶವನ್ನು ಹೊಂದಲಾಗಿದೆ.

ವಾಭಾ: ಯುವಜನರಲ್ಲಿ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡಲು ಸರಕಾರ ಯಾವ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ?

ರಹೀಂ ಖಾನ್:  ಯುವಜನರು ಹೆಚ್ಚು ಹೆಚ್ಚು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ. ಇದಕ್ಕೆ ಪೂರಕವಾಗಿ ಕ್ರೀಡಾ ಇಲಾಖೆಯಿಂದ ಪ್ರಥಮ ಬಾರಿಗೆ ಆನ್‌ಲೈನ್ ಮೂಲಕ ಟೋಲ್ ಫ್ರೀ ಮಾಹಿತಿ ಸೇವೆ ಆರಂಭಿಸಲಾಗಿದೆ. ಇಲಾಖೆಯಿಂದ ಯಾವ ಕ್ರೀಡೆಗೆ ಸೌಲಭ್ಯಗಳು ದೊರೆಯುತ್ತವೆ? ಅವುಗಳನ್ನು ಪಡೆಯಲಿರುವ ಅರ್ಹತೆಗಳೇನು? ಯಾವ ಅಧಿಕಾರಿಗಳನ್ನು ಸಂಪರ್ಕಿಸಬೇಕು? ಇತ್ಯಾದಿ ಮಾಹಿತಿಗಳನ್ನು ಈ ಟೋಲ್ ಫ್ರಿ ಮೂಲಕ ಯುವಜನರು ಪಡೆಯಬಹುದು.

ವಾಭಾ: ಶಾಲಾ ಕಾಲೇಜು ಮಟ್ಟದಲ್ಲಿ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಯೋಜನೆಗಳಿವೆಯೇ?

ರಹೀಂ ಖಾನ್: ನಗರಗಳಿಗಿಂತಲೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಕ್ರೀಡಾಪ್ರತಿಭೆಗಳಿವೆ. ಆದರೆ, ಅವರಿಗೆ ಕ್ರೀಡಾಚಟುವಟಿಕೆಗಳಿಗೆ ಪೂರಕವಾದ ಮೂಲ ಸೌಕರ್ಯಗಳ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಸರಬರಾಜು ಮಾಡಲು ಒಂದರಿಂದ ಐದು ಲಕ್ಷ ರೂ. ಅನುದಾನ ನೀಡುವ ಯೋಜನೆ ಇದೆ. ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ಪೋತ್ಸಾಹಧನ ನೀಡಲು ರಾಜ್ಯದಲ್ಲಿ ಒಂದು ಕೋಟಿ ರೂ. ಮೀಸಲಿಡಲಾಗಿದೆ.

ವಾಭಾ: ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ಮತ್ತು ಜಿಮ್‌ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರಕಾರದ ಯೋಜನೆಗಳಿವೆಯೇ ?

ರಹೀಂ ಖಾನ್: ಸರಕಾರದ ಹಂತದಲ್ಲಿ ಈ ಬಗ್ಗೆ ಚಿಂತನೆ ಇದೆ. ಗ್ರಾಮೀಣ ಭಾಗದಲ್ಲೂ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಬಗ್ಗೆ ವಿವಿಧ ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹಿಸಿ ಕಾರ್ಯಯೋಜನೆ ರೂಪಿಸಲಾಗುವುದು. ಮೊದಲನೆಯದಾಗಿ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾಗಿ ಬೇಕಾದ ಮೂಲ ಸೌಕರ್ಯಗಳನ್ನು ಹಂತಹಂತವಾಗಿ ಜಿಲ್ಲೆಯಿಂದ, ತಾಲೂಕು ಮತ್ತು ಗ್ರಾಮಾಂತರ ಪ್ರದೇಶಗಳಿಗೂ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top