ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ರಾಜಕೀಯ ಜೀವನದ ಅಪರೂಪದ ಚಿತ್ರಗಳು...
ಹೃದಯಾಘಾತದಿಂದ ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ 2004ರಿಂದ 2006ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದವರು. 1936, ಡಿ.25ರಂದು ಜೀವರ್ಗಿ ತಾಲೂಕಿನ ನೆಲೋಗಿಯಲ್ಲಿ ಜನಿಸಿದ್ದ ಧರಂ ಸಿಂಗ್ 1978ರಲ್ಲಿ 2008ರತನಕ ಸತತ 7 ಬಾರಿ ಶಾಸಕರಾಗಿದ್ದರು. 1980ರಲ್ಲಿ ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ್ದರು. 2009ರಲ್ಲಿ ಬೀದರ್ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು, 2013ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ 2006-07ರ ತನಕ ಕರ್ನಾಟಕ ವಿಧಾನಸಭೆಯ ವಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿದ್ದರು.
ಧರಂ ಸಿಂಗ್ ಅವರ ರಾಜಕೀಯ ಜೀವನದ ಕೆಲ ಅಪರೂಪದ ಚಿತ್ರಗಳು ಇಲ್ಲಿವೆ..
1980ರಲ್ಲಿ ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರೊಂದಿಗೆ
--------------------
1977ರಲ್ಲಿ ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ
--------------------
1981 ರಲ್ಲಿ ಪ್ರಧಾನಿ ಇಂದಿರಾಗಾಂಧಿ ಅವರೊಂದಿಗೆ
--------------------
ಮೈಸೂರು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅಂದಿನ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್, ಸಿದ್ದಗಂಗಾ ಶ್ರೀಗಳು ಹಾಗೂ ತರಳುಬಾಳು ಸ್ವಾಮೀಜಿಯೊಂದಿಗೆ
--------------------
2004 ಮೇ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭ
--------------------
ಅಂದಿನ ಪ್ರಧಾನಿ ಮನ್ಮೋಹನ್ಸಿಂಗ್ ಅವರೊಂದಿಗೆ
--------------------
2005 ರಲ್ಲಿ ನವದೆಹಲಿಯಲ್ಲಿ ನಡೆದ ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ ಸಂದರ್ಭ
--------------------
ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ
--------------------
2004 ರಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ