ಅಂಬೇಡ್ಕರ್ ಜಯಂತಿ...
ಮಹಾರಾಷ್ಟ್ರದ ನಾಗ್ಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ 126ನೆ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ‘ಸಂವಿಧಾನ ಶಿಲ್ಪಿ’ಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಸಂದರ್ಭ ಉಪಸ್ಥಿತರಿದ್ದರು. ದೇಶಾದ್ಯಂತ ವಿವಿಧೆಡೆ ಸಂವಿಧಾನ ಶಿಲ್ಪಿಗೆ ನಮನ ಸಲ್ಲಿಸಲಾಯಿತು.