ನರೇಂದ್ರ ಮೋದಿ, ಅಮಿತ್ ಶಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಹೊಸದಿಲ್ಲಿ, ಮೇ 11: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ದ ಕಾಂಗ್ರೆಸ್ ನಾಯಕರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಅಶೋಕ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಶುಕ್ರವಾರ ಬೆಳಗ್ಗೆ ತೆರಳಿದ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್ ಹಾಗೂ ಮನನ್ ವೋರಾ ಅವರು ಮೋದಿ ಹಾಗೂ ಶಾ ವಿರುದ್ಧ ದೂರು ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಯೋಗವನ್ನು ಆಗ್ರಹಿಸಿದ್ದಾರೆ.
ಕರ್ನಾಟಕದ ಚುನಾವಣೆಯ ಪ್ರಚಾರದ ವೇಳೆ ಮೋದಿ ಹಾಗೂ ಶಾ ಜನರನ್ನು ತಪ್ಪು ದಾರಿಗೆಳೆಯುವ ಭಾಷಣ ಮಾಡಿದ್ದು, ಎದುರಾಳಿಗಳನ್ನು ವೈಯಕ್ತಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದೆ.
Next Story