ಮೈಸೂರು: ಬೈಕ್ಗೆ ಕಾರು ಢಿಕ್ಕಿ; ಸವಾರ ಮೃತ್ಯು
ಮೈಸೂರು,ಜು.6: ಚಾಮುಂಡಿ ಬೆಟ್ಟದ ಐ ವಾಚ್ ಜಂಕ್ಷನ್ ಬಳಿ ಬೈಕ್ಗೆ ಕಾರು ಗುದ್ದಿದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ನಡೆದಿದ್ದು, ಕಾರು ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ.
ನಿನ್ನೆ ರಾತ್ರಿ ಚಾಮುಂಡಿ ಬೆಟ್ಟದ ಐ ವಾಚ್ ಜಂಕ್ಷನ್ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಅರವಿಂದ್ ರಾವ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿಯಲ್ಲಿ ಕುಳಿತಿದ್ದ ಯುವತಿ ನಮನಾಗೆ (21) ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ನಮನಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಮೈಸೂರಿನ ಸಿದ್ಧಾರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story