ಹುಬ್ಬಳ್ಳಿ: ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ
ಹುಬ್ಬಳ್ಳಿ, ಆ. 12: ಹುಬ್ಬಳ್ಳಿಯ ತಿಮ್ಮಸಾಗರ ಗ್ರಾಮ, ಹೊಸೂರು ಉಣಕಲ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಹುಬ್ಬಳ್ಳಿ ನೂತನ ನ್ಯಾಯಾಲಯಗಳ ಸಂಕೀರ್ಣದ ಉದ್ಘಾಟನೆಯನ್ನು ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ರವಿವಾರ ಉದ್ಘಾಟಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರುಗಳಾದ ಮೋಹನ್ ಎಂ, ಶಾಂತನಗೌಡರ್, ಎಸ್ ಅಬ್ದುಲ್ ನಝೀರ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಧೀಶರಾದ ರವಿ ಮಳಿಮಠ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾದೀಶ ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಬೂದಿಹಾಳ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಭೂತೆ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಎ ಬಿ ಬಳಿಗಾರ್ ಮತ್ತಿತರರು ಉಪಸ್ಥಿತಿತರಿದ್ದರು.