ಗುಂಡ್ಲುಪೇಟೆ: ಕಾರು ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಗುಂಡ್ಲುಪೇಟೆ,ಆ.25: ತಾಲೂಕಿನ ಬೇಗೂರು ಸಮೀಪ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಡೆದಿದೆ.
ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಜಗದೀಶ್(30) ತಮ್ಮ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಢಿಕ್ಕಿ ಹೊಡೆದಿದ್ದು, ಪರಿಣಾಮ ತಲೆಗೆ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣೆಯ ಪಿ.ಎಸ್.ಐ ಕಿರಣ್ ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Next Story