ಮಡಿಕೇರಿ: ಸಾಲ ಮರು ಪಾವತಿಸಲಾಗದೆ ಮಹಿಳೆ ಆತ್ಮಹತ್ಯೆ
ಮಡಿಕೇರಿ, ಆ.6: ಖಾಸಗಿ ಹಣಕಾಸು ಸಂಘವೊಂದರಲ್ಲಿ ಮಾಡಿದ್ದ ಸಾಲವನ್ನು ಮರುಪಾವತಿಸಲಾಗದೇ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮರಗೋಡು ಗ್ರಾಮದಲ್ಲಿ ನಡೆದಿದೆ. ಮರಗೋಡು ನಿವಾಸಿ ಆಶಾ (34) ಎಂಬುವರೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ.
ಆಶಾ ಈ ಹಿಂದೆ ಸಂಘವೊಂದರಿಂದ 2 ಲಕ್ಷ ರೂಪಾಯಿಗಳ ಸಾಲ ಪಡೆದಿದ್ದು, 85 ಸಾವಿರ ರೂಪಾಯಿಗಳನ್ನು ಮರುಪಾವತಿಸಿದ್ದರು. ಉಳಿದ ಸಾಲದ ಹಣ 1.15 ಲಕ್ಷ ರೂಪಾಯಿಗಳ ಸಾಲವನ್ನು ಪಾವತಿಸಲು ಬಾಕಿ ಇತ್ತು. ಈ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಪ್ರಕರಣದ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತೆ ಆಶಾ ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Next Story