ಅ.1: ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಬೆಂಗಳೂರು, ಸೆ.6: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಸೆ.18ರಂದು ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಸ್ಪರ್ಧೆಯನ್ನು ಹಾಗೂ ಸೆ.19ರಂದು ಕೃಷಿ ತಂತ್ರಜ್ಞರ ಸಂಸ್ಥೆ(ರಿ), ನಂ.15, ಕ್ವೀನ್ಸ್ ರಸ್ತೆ, ಕಾಂಗ್ರೆಸ್ ಕಚೇರಿ ಹತ್ತಿರ, ಬೆಂಗಳೂರು ಇಲ್ಲಿ ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story