ಕಾಸರಗೋಡು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಯುವಕ ಮೃತ್ಯು
ಕಾಸರಗೋಡು, ಸೆ.7: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಾಸರಗೋಡು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ನಾಯಮ್ಮಾರ್ಮೂಲೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಪೆರುಂಬಳ ಮಾಳಿಗೆ ಹೌಸ್ ನಿವಾಸಿ ಫಹಾದ್(26) ಎಂದು ಗುರುತಿಸಲಾಗಿದೆ.
ಸ್ನೇಹಿತನೋರ್ವನನ್ನು ಮಂಗಳೂರಿಗೆ ತಲಪಿಸಿ ಮನೆಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಫಹಾದ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಎರಡು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆದು ಬಳಿಕ ಮನೆಯೊಂದರ ಕಂಪೌಂಡ್ಗೆ ಬಡಿದು ಮಗುಚಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡಿದ್ದ ಫಹಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಫಹಾದ್ ಗಲ್ಫ್ ಉದ್ಯೋಗಿಯಾಗಿದ್ದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
Next Story