ಕುಮಟಾ: ಬಸ್ಸಿನಡಿಗೆ ಸಿಲುಕಿ ಮಹಿಳೆ ಮೃತ್ಯು
ಕುಮಟಾ, ಸೆ.7: ಮಹಿಳೆಯೊಬ್ಬಳು ಬಸ್ ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಾಡ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಮರಿಯಮ್ ಬಿ ಶೇಖ್ ಎಂದು ಗುರುತಿಸಲಾಗಿದೆ. ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಸ್ಸಾಗುತ್ತಿದ್ದ ಸಂದರ್ಭ ಇವರಿಗೆ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ರಸ್ತೆಗೆ ಬಿದ್ದ ಮರಿಯಮ್ ಮೇಲೆ ಬಸ್ ಚಲಿಸಿದ್ದರಿಂದ ಚಕ್ರದಡಿಗೆ ಸಿಲುಕಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ
ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ದೂರಲಾಗಿದೆ.
ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story