ಏಕಲವ್ಯ, ಜೀವಮಾನ ಸಾಧನೆಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆ.7: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2017 ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2018 ನೆ ಸಾಲಿನ ಕರ್ನಾಟಕ ಕ್ರೀಡಾ ಪ್ರವರ್ತಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತಿಯುಳ್ಳವರು ಆಯಾ ಜಿಲ್ಲೆಗಳ ಉಪ ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಲ್ಲಿಂದ ಪಡೆಯಬಹುದು. ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದ ರಾಜ್ಯ ಕ್ರೀಡಾ ಸಂಸ್ಥೆಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಸೆ.25 ರೊಳಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story