ಮಂಡ್ಯ: ಬಸ್ಗಳ ನಡುವೆ ಅಪಘಾತ; ಹಲವು ಪ್ರಯಾಣಿಕರಿಗೆ ಗಾಯ
ಮಂಡ್ಯ,ಸೆ.12: ಖಾಸಗಿ ಬಸ್ಗೆ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಸಂಭವಿಸಿದೆ.
ಗಾಯಾಳುಗಳನ್ನು ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಖಾಸಗಿ ಬಸ್ ಹಿಂದಿಕ್ಕುವ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಎರಡೂ ಬಸ್ಗಳ ಚಾಲಕರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ.
ಗಾಯಾಳುಗಳಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಈ ಸಂಬಂಧ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story