ವಚನ ಬೆಳಕು

07th Sep, 2018
ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹಾದೇವಸೆಟ್ಟಿ. ಒಮ್ಮನವಾದರೆ ಒಡನೆ ನುಡಿವನು; ಇಮ್ಮನವಾದರೆ ನುಡಿಯನು. ಕಾಣಿಯ ಸೋಲ, ಅರ್ಧಗಾಣಿಯ ಗೆಲ್ಲ; ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ                            ...
03rd Sep, 2018
ಅಪ್ಪುವಿನ ಶಿಲೆಯ ಉಳಿಯ ಮೊನೆಯಲ್ಲಿ ಚಿತ್ರಿಸಬಹುದೆ? ಅರಗಿನ ಘಟವ ಉರಿಯ ಮೊನೆಯಲ್ಲಿ ಅಕ್ಷರವ ಬರೆಯಬಹುದೆ? ಮೃತ್ತಿಕೆಯ ಹರಿಗೋಲನೇರಿ ನದಿಯ ತಪ್ಪಲಿಗೆ ಹೋಗಬಹುದೆ? ನಿಜನಿಶ್ಚಯವನರಿಯದವನ ವಾಚಾರಚನೆ ಇಷ್ಟಲ್ಲದಿಲ್ಲ. ನಿಜತತ್ತ್ವವನರಿದವನ ವಾಚಾರಚನೆಯ ಕುರುಹೆಂತುಟೆಂದಡೆ: ಶಿಲೆಯೊಳಗಣ ಸುರಭಿಯಂತೆ ಪ್ರಳಯದೊಳಗಾದ ನಿಜನಿವಾಸದಂತೆ ಆಯದ ಘಾಯದಂತೆ, ಸುಘಾಯದ ಸುಖದಂತೆ ಇಂತೀ ಭಾವರಹಿತವಾದ ಭಾವಜ್ಞನ ತೇರ ಕೂಗಿಂಗೆ ಹೊರಗು ಮಹಾಮಹಿಮ ಮಾರೇಶ್ವರಾ.    ...
27th Aug, 2018
ಗೋವು ಮೊದಲು ಚತುಃಪಾದಿ ಜೀವಂಗಳು ತಾವು ಬಂದ ಹಾದಿಯ ಮೂಸಿ ನೋಡಿ ತಮ್ಮಯ ಬೀಡಿಂಗೆ ಹೋಹಂತೆ, ಆ ಪರಿ ನಿನಗಿಲ್ಲ, ಪಶುವಿನ ಮತಿಯಷ್ಟು ಗತಿಯಿಲ್ಲ. ಬಂದುದ ಮರೆದ ಬಂಧಜೀವಿಗ ನಾನಾಗಿ ಜೀವಕಾಯದ ಸಂದ ಬಿಡಿಸು. ಬಿಂದು ನಿಲುವ ಅಂದವ ಹೇಳು, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.            ...
24th Aug, 2018
ತಾ ಮಿಥ್ಯನಾದ ಮತ್ತೆ ಜಗವೆಲ್ಲವೂ ತನಗೆ ಮಿಥ್ಯ. ತಾ ತಥ್ಯನಾದ ಮತ್ತೆ ಜಗವೆಲ್ಲವೂ ತನಗೆ ತಥ್ಯ. ಅಂಗೈಯಲ್ಲಿ ಹಿಡಿದು ಕೈದು ನೋಡದೆ ಅಲಗು ಕೆಟ್ಟಿತ್ತೆಂದು ಹಲಬುವನಂತಾಗದೆ, ತನ್ನ ತಾ ಮರೆದು ಅನ್ಯರ ದೆಸೆಯಿಂದ ತನ್ನ ಕೇಳುವನಂತಾಗದೆ ಅರಿ ನಿಜದರಿವ ಮರೆಯದಂತೆ ಕಾಲಕರ್ಮವಿರಹಿತ ತ್ರಿಪುರಾಂತಕಲಿಂಗದೊಳಗಾದವನ ಇರವು.          ...
13th Aug, 2018
ಇಷ್ಟವೆಂಬುದು ಗುರುವಿನ ಹಂಗು ಆ ಗುರುವಿಂಗೆಯು, ಇಷ್ಟಲಿಂಗಕ್ಕೆಯು, ಜಂಗಮವೆ ಪ್ರಾಣಪದವೆಂದರಿತ ಬಳಿಕ ಆ ಗುರುವೂ ಇಷ್ಟವೂ ಜಂಗಮದಲ್ಲಿಯೇ ಅಡಕ ನೋಡಾ! ಆ ಗುರುವೂ ಲಿಂಗವೂ ಜಂಗಮದ ಹಂಗಿಗರು! ಇದು ಕಾರಣ ಚಂದೇಶ್ವರಲಿಂಗಕ್ಕೆ ಕಣ್ಣಿಯ ಮಾಡಬಲ್ಲಡೆ ಬಾರಾ ಎನ್ನ ತಂದೆ.                  ...
10th Aug, 2018
ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ ಭಕ್ತಿಯ ಬೆಳವಿಗೆ ದೆಸೆದೆಸೆಗೆಲ್ಲಾ ಪಸರಿಸಿತ್ತಲ್ಲಾ! ಅಯ್ಯ, ಸ್ವರ್ಗ ಮರ್ತ್ಯ ಪಾತಾಳದೊಳಗೆಲ್ಲಾ ನಿಮ್ಮ ಭಕ್ತಿಯ ಬೆಳವಿಗೆಯ ಘನವನಾರು ಬಲ್ಲರು? ಅಣ್ಣಾ, ಶಶಿಧರನಟ್ಟಿದ ಮಣಿಹ ಪೂರೈಸಿತ್ತೆಂದು ನೀವು ಲಿಂಗೈಕ್ಯವಾದೊಡೆ, ನಿಮ್ಮಡನೆ ಭಕ್ತಿ ಹೋಯಿತ್ತಯ್ಯಿ. ನಿಮ್ಮಡನೆ ಅಸಂಖ್ಯಾತ ಮಹಾಗಣಂಗಳು ಹೋದರಣ್ಣಾ. ಮರ್ತ್ಯಲೋಕದ ಮಹಾಮನೆ ಶೂನ್ಯವಾಯಿತ್ತಲ್ಲಾ ಬಸವಣ್ಣಾ. ಎನ್ನನೊಯ್ಯದೆ ಹೋದೆಯಲ್ಲಾ ಪಂಚಪರುಷಮೂರ್ತಿ...
06th Aug, 2018
ಮಾರುತನಲ್ಲಿ ಬೆರೆದ ಗಂಧದಂತೆ, ಸುರತದಲ್ಲಿ ಬೆರೆದ ಸುಖದಂತೆ, ಮಚ್ಚಿದಲ್ಲಿ ಕೊಡುವ ಉಚಿತದಂತೆ, ಭಕ್ತರಿಗದೆ ಹಾದಿ ಎಂದೆ ನಾಸ್ತಿನಾಥಾ.                                      -ಗೊಗ್ಗವ್ವೆ ಗೊಗ್ಗವ್ವೆ ಕೇರಳದ ಆವಲೂರಿನವಳು. ತಂದೆ-ತಾಯಿ ಮದುವೆಗೆ ಒತ್ತಾಯಿಸಿದಾಗ ನಿರಾಕರಿಸಿದಳು. ವಿರಾಗಿಣಿಯಾಗಿ ಕಲ್ಯಾಣಕ್ಕೆ ಬಂದಳು. ‘ಶರಣ ಸತಿ, ಲಿಂಗ ಪತಿ’ ಭಾವದಿಂದ ಕೂಡಿದ ಲಿಂಗಾಂಗ ಸಾಮರಸ್ಯದ ಪರಮಾನಂದವನ್ನು ಅನುಭವಿಸಿದವಳು....
03rd Aug, 2018
ಕೈತಪ್ಪಿಕೆತ್ತಲು ಕಾಲಿಗೆ ಮೂಲ, ಮಾತು ತಪ್ಪಿನುಡಿಯಲು ಬಾಯಿಗೆ ಮೂಲ, ವ್ರತಹೀನನ ನೆರೆಯಲು ನರಕಕ್ಕೆ ಮೂಲ, ಕರ್ಮಹರ ಕಾಳೇಶ್ವರಾ.                   -ಬಾಚಿಕಾಯಕದ ಬಸವಯ್ಯಗಳ ಪುಣ್ಯಸ್ತ್ರೀ ಕಾಳವ್ವೆ ಬಾಚಿ ಎಂದರೆ ಮರವನ್ನು ಕೆತ್ತಲು ಬಡಗಿಗಳು ಬಳಸುವ ಅಗಲವಾದ ಬಾಯಿಯ ಕಬ್ಬಿಣದ...
30th Jul, 2018
 ಎನ್ನ ಕಣ್ಣೊಳಗಣ ಕಟ್ಟಿಗೆಯ ಮುರಿವವರನಾರನೂ ಕಾಣೆ. ಎನ್ನ ಕಾಲೊಳಗಣ ಮುಳ್ಳ ತೆಗೆವವರನಾರನೂ ಕಾಣೆ. ಎನ್ನ ಅಂಗದಲ್ಲಿದ್ದ ಅಹಂಕಾರವ ಸುಡುವವರನಾರನೂ ಕಾಣೆ. ಎನ್ನ ಮನದಲ್ಲಿಪ್ಪಮಾಯಾಪ್ರಪಂಚವ ಕೆಡಿಸುವವರನಾರನೂ ಕಾಣೆನಯ್ಯ. ಆದ್ಯರ ವೇದ್ಯರ ವಚನಗಳಿಂದ ಅರಿದೆವೆಂಬವರು ಅರಿಯಲಾರರು ನೋಡಾ. ಎನ್ನ ಕಣ್ಣೊಳಗಣ ಕಟ್ಟಿಗೆಯ ನಾನೆ ಮುರಿಯಬೇಕು. ಎನ್ನ ಕಾಲೊಳಗಣ ಮುಳ್ಳ ನಾನೆ ತೆಗೆಯಬೇಕು. ಎನ್ನ ಅಂಗದಲ್ಲಿಪ್ಪಅಹಂಕಾರವ ನಾನೆ...
27th Jul, 2018
ಲಿಂಗದೇವನೆ ಕರ್ತ, ಶಿವಭಕ್ತನೇ ಶ್ರೇಷ್ಠ. ಕೊಲ್ಲದಿರ್ಪುದೆ ಧರ್ಮ. ಅಧರ್ಮದಿಂದ ಬಂದುದನೊಲ್ಲದಿರ್ಪುದೆ ನೇಮ. ಅಳುಪಿಲ್ಲದಿರ್ಪುದೆ ವ್ರತ. ಇದೇ ಸತ್ಪಥ, ಉಳಿದುದೆಲ್ಲ ಮಿಥ್ಯವೆಂದೆ ಕಾಣಾ, ದೇವರಾಯ ಸೊಡ್ಡಳಾ.                                    ...
23rd Jul, 2018
ಕಷ್ಟಕುಲದಲ್ಲಿ ಹುಟ್ಟಿದ ಕರ್ಮವ ಕಳೆದು ಮುಟ್ಟಿ ಪಾವನ ಮಾಡಿ, ಕೊಟ್ಟನಯ್ಯಿ ಎನ್ನ ಕರಸ್ಥಳಕೆ ಲಿಂಗವ. ಆ ಲಿಂಗ ಬಂದು ಸೋಂಕಲೊಡನೆ ಎನ್ನ ಸರ್ವಾಂಗದ ಅವಲೋಹವಳಿಯಿತ್ತಯ್ಯ. ಎನ್ನ ತನುವಿನಲ್ಲಿ ಗುರುವ ನೆಲೆಗೊಳಿಸಿ, ಎನ್ನ ಮನದಲ್ಲಿ ಜಂಗಮವ ನೆಲೆಗೊಳಿಸಿ, ಎನ್ನ ಅರಿವಿನಲ್ಲಿ ಪ್ರಸಾದವ ನೆಲೆಗೊಳಿಸಿದ. ಇಂತೀ ತ್ರಿಸ್ಥಾನವ ಶುದ್ಧ ಮಾಡಿದ ಬಸವಣ್ಣನ ಕರುಣದಿಂದ ಪ್ರಭುವಿನ ಶ್ರೀಪಾದವ...
20th Jul, 2018
ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾಯಿತ್ತು; ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರಕಠಿಣವಾಗಿತ್ತು; ಮೊದಲಲ್ಲಿ ಲಿಂಗಭಕ್ತಿ ಹಿತವಾಯಿತ್ತು; ಕಡೆಯಲ್ಲಿ ಜಂಗಮಭಕ್ತಿ ಕಠಿಣವಾಯಿತ್ತು; ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯ.                              ...
16th Jul, 2018
ಊರಮುಂದೆ ಹಾಲಹಳ್ಳ ಹರಿಯುತ್ತಿರಲು ಓರೆಯಾವಿನ ಬೆನ್ನಲಿ ಹರಿಯಲದೇಕಯ್ಯ. ಲಜ್ಜೆಗೆಡಲೇಕೆ? ನಾಣುಗೆಡಲೇಕೆ? ಕೂಡಲಸಂಗಮದೇವರುಳ್ಳನ್ನಕ್ಕ ಬಿಜ್ಜಳನ ಭಂಡಾರವೆನಗೇಕಯ್ಯ.                          -ಬಸವಣ್ಣ ‘‘ಊರ ಮುಂದೆ ಹಾಲಹಳ್ಳ ಹರಿಯುವಾಗ ಮೊಂಡಹಸುವಿನ ಹಿಂದೆ ನಾನೇಕೆ ಓಡಲಿ? ನಾನೇಕೆ ನಾಚಿಕೆಗೆಡಬೇಕು? ನಾನೇಕೆ ಅಪಮಾನಕ್ಕೊಳಗಾಗಬೇಕು?...
09th Jul, 2018
ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗಹೀನರ ಬೆರಸಲಾಗದು. ಅಂಗದ ಮೇಲೆ ಲಿಂಗವಿದ್ದ ಬಳಿಕ, ಲಿಂಗ ಮುಂತಾಗಿ ಎಲ್ಲಾ ಕ್ರೀಗಳನೂ ಗಮನಿಸಬೇಕಲ್ಲದೆ, ಅಂಗ ಮುಂತಾಗಿ ಗಮನಿಸಲಾಗದು. ಲಿಂಗಸಂಬಂಧಿಯಾಗಿ ಅಂಗ ಮುಂತಾಗಿಪ್ಪವರು ಲಿಂಗಕ್ಕೆ ದೂರವಯ್ಯೆ,  ನಾಗಪ್ರಿಯ ಚೆನ್ನರಾಮೇಶ್ವರಾ.                     ...
06th Jul, 2018
ಅರ್ಥವೆಂಬುದೆ ಪಾಪ, ಬೇರೆ ಪಾಪವಿಲ್ಲ ಕಂಡಯ್ಯ. ಪರಿಣಾಮವೆಂಬುದೆ ಪುಣ್ಯ, ಬೇರೆ ಪುಣ್ಯವಿಲ್ಲ ಕಂಡಯ್ಯ, ಪಾಪಪುಣ್ಯಗಳನತಿಗಳೆದ ಉಳುಮೆ, ಶಿವಯೋಗ. ಮಹಾಲಿಂಗ ಕಲ್ಲೇಶ್ವರನು ಬಲ್ಲ ಸಿದ್ಧರಾಮನ ಪರಿಯ                                ...
02nd Jul, 2018
ಗುಮ್ಮಡಿಯಂತಪ್ಪತಾಯಿ ನೋಡೆನಗೆ, ಕಲಕೇತನಂತಪ್ಪತಂದೆ ನೋಡೆನಗೆ, ಮೋಟನಂತಪ್ಪಗಂಡ ನೋಡೆನಗೆ, ಮರಗಾಲಲಟ್ಟಟ್ಟಿ ಸದೆದ ನೋಡಯ್ಯಿ. ಇಂದೆನ್ನ ಒಕ್ಕತನ ಹೋದಡೆ ಹೋಗಲಿ ಮರಗಾಲ ಬಿಟ್ಟಡೆ, ಸಂಗಾ ನಿಮ್ಮಾಣೆ.                                      ...
29th Jun, 2018
ಕಂಥೆಯ ಕಟ್ಟಿ, ತಿತ್ತಿಯ ಹೊತ್ತು ಕಂಥೆಯ ಕಟ್ಟಿ, ತಿತ್ತಿಯ ಹೊತ್ತು, ಮರಿಯ ನಡಸುತ್ತ, ದೊಡ್ಡೆಯ ಹೊಡೆವುತ್ತ, ಅಡ್ಡಗೋಲಿನಲ್ಲಿ ಹೋಹ ಚುಕ್ಕಿ ಬೊಟ್ಟಿನವ ತಿಟ್ಟುತ್ತ, ಹಿಂಡನಗಲಿ ಹೋಹ ದಿಂಡೆಯ ಮಣೆಘಟ್ಟನ ಅಭಿಸಂಧಿಯ ಕೋಲಿನಲ್ಲಿಡುತ್ತ, ಈ ಹಿಂಡಿನೊಳಗೆ ತಿರುಗಾಡುತ್ತಿದ್ದೇನೆ. ಈ ವಿಕಾರದ ಹಿಂಡ ಬಿಡಿಸಿ, ನಿಜನಿಳಯ ನಿಮ್ಮಂಗವ ತೋರಿ, ಸುಸಂಗದಲ್ಲಿರಿಸು, ಎನ್ನೊಡೆಯ ವೀರಬೀರೇಶ್ವರಲಿಂಗಾ.      ...
25th Jun, 2018
ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ? ಕಡೆ ನಡುವೆಂದೇನೊ ಮೃಡನ ಹಾಡುವಂಗೆ? ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ? ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ? ಕಲಿಯುಗದ ಕತ್ತಲೆಯ ದಾಂಟಿದವಂಗೆ, ನಿಮ್ಮ ನೆಲೆಯನರಿದ ಶರಣಂಗೆ ಇನ್ನು ಸ್ಥಳನೆಲೆ ಆವುದುಂಟು ಹೇಳಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ?                    ...
22nd Jun, 2018
ನಡೆನುಡಿ ಸಿದ್ಧಾಂತವಾದಲ್ಲಿ ಕುಲ ಹೊಲೆ ಸೂತಕವಿಲ್ಲ. ನುಡಿ ಲೇಸು ನಡೆಯಧಮವಾದಲ್ಲಿ, ಅದು ಬಿಡುಗಡೆಯಿಲ್ಲದ ಹೊಲೆ. ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ, ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ ಒಡಲವರುಂಟೆ? ಆಚಾರವೆ ಕುಲ, ಅನಾಚರವೆ ಹೊಲೆ. ಇಂತೀ ಉಭಯವ ತಿಳಿದರಿಯಬೇಕು. ಕೈಯುಳಿಕತ್ತಿ ಅಡಿಗೂಂಟಕ್ಕೆ ಅಡಿಯಾಗಬೇಡ, ಅರಿ ನಿಜಾತ್ಮಾರಾಮನಾ                ...
18th Jun, 2018
ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ. ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ. ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ. ಸೀಮೆಯ ಸಂಬಂಧವ ತಪ್ಪಿಸಿ ಹೋದಾತ ನೀನಲಾ ಬಸವಣ್ಣ. ಲಿಂಗಕ್ಕೆ ಮಾಡಿದುದ ಸೋಂಕದೆ ಹೋದೆಯಲ್ಲಾ ಬಸವಣ್ಣ. ಜಂಗಮಕ್ಕೆ ಮಾಡಿದ ಮಾಟವ ಕೈಯಲ್ಲಿ ಹಿಡಿದುಕೊಂಡು ಹೋದೆಯಲ್ಲಾ ಬಸವಣ್ಣ. ಬೆಳಗನುಟ್ಟು...
11th Jun, 2018
ಕರಣ ನಾಲ್ಕು, ಮದವೆಂಟು, ವ್ಯಸನವೇಳು, ಅರಿಷಡ್ವರ್ಗಂಗಳಲ್ಲಿ, ಇಂತೀ ಉರವಣೆಗೊಳಗಾಗುತ್ತ, ಅಣವ ಮಾಯಾ ಕಾರ್ಮಿಕವೆಂಬ ಮೂರು ಸುರೆಯಲ್ಲಿ ಮದಡುತ್ತ ನಾ ತಂದೆ ಸುಧೆ, ನಿಮಗೆಲ್ಲ ಎಂದೆ. ಅದು ಧರ್ಮೇಶ್ವರಲಿಂಗದ ಅರ್ಪಣೆ.                            ...
08th Jun, 2018
ಹದ ಮಣ್ಣಲ್ಲದೆ ಮಡಕೆಯಾಗಲಾರದು. ವ್ರತಹೀನನ ಬೆರೆಯಲಾಗದು. ಬೆರೆದಡೆ ನರಕ ತಪ್ಪದು. ನಾನೊಲ್ಲೆ ಬಲ್ಲೆನಾಗಿ ಕುಂಭೇಶ್ವರಾ.                           -ಗುಂಡಯ್ಯಗಳ ಪುಣ್ಯಸ್ತ್ರೀ ಕೇತಲದೇವಿ  ಬೀದರ್ ಜಿಲ್ಲೆ ಭಾಲ್ಕಿಯ ಕುಂಬಾರ ಗುಂಡಯ್ಯನವರ ಸತಿ ಕೇತಲದೇವಿ ಬಸವಣ್ಣನವರ...
04th Jun, 2018
ಊರ ಒಳಗಣ ಬಯಲು, ಊರ ಹೊರಗಣ ಬಯಲೆಂದುಂಟೆ? ಊರೊಳಗೆ ಬ್ರಾಹ್ಮಣ ಬಯಲು, ಊರ ಹೊರಗೆ ಹೊಲೆಬಯಲೆಂದುಂಟೆ? ಎಲ್ಲಿ ನೋಡಿದೊಡೆ ಬಯಲೊಂದೆ; ಭಿತ್ತಿಯಿಂದ ಒಳಹೊರಗೆಂಬ ನಾಮವೈಸೆ. ಎಲ್ಲಿ ನೋಡಿದಡೆ ಕರೆದಡೆ ಓ ಎಂಬಾತನೆ ಬಿಡಾಡಿ.                      ...
01st Jun, 2018
ದುಕೂಲ ಮುಂತಾದ ವಸ್ತ್ರಂಗಳಲ್ಲಿ, ಹೇಮ ಮುಂತಾದ ಆಭರಣಂಗಳಲ್ಲಿ, ಮೌಕ್ತಿಕ ರತ್ನ ಮುಂತಾದ ಪಾಷಾಣಂಗಳಲ್ಲಿ, ಚಂದನ ಗಂಧ ಮುಂತಾದ ಸುವಾಸನೆಯಲ್ಲಿ, ಅಂದಳ ಛತ್ರ ಚಾಮರ ಕರಿ ತುರಗಂಗಗಳು ಮುಂತಾದ, ತಾನು ಸೋಂಕುವ ವೈಭವ ಮುಂತಾದ ಸಕಲಸುಖಂಗಳು ಲಿಂಗಕ್ಕೆಂದು ಕಲ್ಪಿಸಿ, ಅಂಗೀಕರಿಸುವವನಿರವು ವಾರಿಶಿಲೆ ನೋಡನೋಡಲಿಕ್ಕೆ ನೀರಾದ ತೆರದಂತೆ, ಅಂಬರದ ವರ್ಣ ನಾನಾ ಚಿತ್ರದಲ್ಲಿ ಸಂಭ್ರಮಿಸಿ ಕಂಗಳು ಮುಚ್ಚಿ...
28th May, 2018
ಅಯ್ಯ, ಎನ್ನ ಹೃದಯದಲ್ಲಿ ವ್ಯಾಪ್ತವಾಗಿಹ ಪರಮ ಚಿದ್ಬೆಳಗ ಹಸ್ತಮಸ್ತಕ ಸಂಯೋಗದಿಂದೊಂದುಗೂಡಿ ಮಹಾಬೆಳಗು ಮಾಡಿದಿರಲ್ಲಾ. ಅಯ್ಯ, ಎನ್ನ ಮಸ್ತಕದೊಳಗೊಂದುಗೂಡಿದ ಮಹಾಬೆಳಗ ತಂದು ಭಾವದೊಳಗಿಂಬಿಟ್ಟಿರಲ್ಲಾ. ಅಯ್ಯ ಎನ್ನ ಭಾವದೊಳಗೆ ಕೂಡಿದ ಮಹಾಬೆಳಗ ತಂದು ಮನಸಿನೊಳಗಿಂಬಿಟ್ಟಿರಲ್ಲಾ. ಅಯ್ಯ ಎನ್ನ ಮನಸಿನೊಳು ಕೂಡಿದ ಮಹಾಬೆಳಗ ತಂದು ಕಂಗಳೊಳಗಿಂಬಿಟ್ಟಿರಲ್ಲಾ. ಅಯ್ಯ, ಎನ್ನ ಕರಸ್ಥಲದಲ್ಲಿ ಥಳಥಳಿಸಿ ಬೆಳಗಿ ಹೊಳೆಯುತ್ತಿಪ್ಪ ಅಖಂಡ ತೇಜವನೆ ಇಷ್ಟಲಿಂಗವೆಂಬ...
25th May, 2018
ಏನಿ ಬಂದಿರಿ, ಹದುಳಿದ್ದಿರೆ ಎಂದಡೆ ನಿಮ್ಮೈಸಿರಿ ಹಾರಿ ಹೋಹುದೆ? ಕುಳ್ಳಿರೆಂದಡೆ ನೆಲ ಕುಳಿಹೋಹುದೆ? ಒಡನೆ ನುಡಿದಡೆ ಸಿರ, ಹೊಟ್ಟೆಯೊಡೆವುದೆ? ಕೊಡಲಿಲ್ಲದಿದ್ದಡೊಂದು ಗುಣವಿಲ್ಲದಿದ್ದಡೆ ಮೂಗ ಕೊಯ್ವುದು ಮಾಬನೆ ಕೂಡಲಸಂಗಮದೇವಯ್ಯ?                                ...
21st May, 2018
ಶೈವಕ್ಕೆ ಕೈಲಾಸ, ವೈಷ್ಣವಕ್ಕೆ ವೈಕುಂಠ, ಬೌದ್ಧಂಗೆ ಮೋಕ್ಷಗಾಮಿನಿಯೆಂಬ ಗೊತ್ತುಗಳು ಬೇರಾದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಬೇರಾದುದಿಲ್ಲ. ಸುವರ್ಣ ಒಂದು, ಆಭರಣ ಹಲವಾದಂತೆ, ಪರಬ್ರಹ್ಮವಸ್ತುವೊಂದೆಂಬುದಕ್ಕೆ ಇದೆ ದೃಷ್ಟ. ಮತ್ತಿದಿರು ದೈವವುಂಟೆಂದು ಗದಿಯಬೇಡ.  ನೆರೆ ನಂಬಿ, ಸದಾಶಿವಮೂರ್ತಿಲಿಂಗವಲ್ಲದಿಲ್ಲಾಯೆಂದೆ.                    ...
18th May, 2018
ಅನಾದಿಯ ಮಗನು ಆದಿ, ಆದಿಯ ಮಗನತೀತ, ಅತೀತನ ಮಗನು ಆಕಾಶ, ಆಕಾಶನ ಮಗನು ವಾಯು, ವಾಯುವಿನ ಮಗನಗ್ನಿ, ಅಗ್ನಿಯ ಮಗನು ಅಪ್ಪು, ಅಪ್ಪುವಿನ ಮಗನು ಪೃಥ್ವಿ,  ಪೃಥ್ವಿಯಿಂದ ಸಕಲ ಜೀವರೆಲ್ಲರು ಉದ್ಭವಿಸಿದರು ಗುಹೇಶ್ವರಾ.                    ...
11th May, 2018
ತ್ರಿದೋಷದ ಗುಣದಿಂದ ನಾನಾ ಬಹುತಾಪತ್ರಯದ ವ್ಯಾಧಿಯ ಚಿಕಿತ್ಸೆಯನಾರು ಅರಿಯರಲ್ಲಾ! ತನುವಿಂಗೆ ವಾತ, ಪೈತ್ಯ, ಶ್ಲೇಷ್ಮ; ಆತ್ಮಂಗೆ ಆಣವ, ಮಾಯಾ, ಕಾರ್ಮಿಕ. ಇಂತೀ ತ್ರಿವಿಧ ಮಲತ್ರಯದ ರೋಗರುಜೆಯಡಸಿ ಬಂಧನದಲ್ಲಿ ಸಾವುತ್ತಿದೆ ಅಂಗ. ಆರೋಗ್ಯ ನಿರೋಗವಹುದಕ್ಕೆ ನಾ ಮೂರು ಬೇರ ತಂದೆ. ಒಂದು ಅಂಗದಲ್ಲಿ ಮರ್ದಿಸಿ, ಒಂದು ಆತ್ಮನಲ್ಲಿ ಮಥನಿಸಿ, ಒಂದು ಅರಿವಿನಲ್ಲಿ ಪಾನವ...
07th May, 2018
ಆನೆ ಕುದುರೆ ಭಂಡಾರವಿರ್ದಡೇನೊ? ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ. ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ. ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ? ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ. ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.      ...
Back to Top