Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಮುದ್ರದಲ್ಲಿ 30 ಕಿ.ಮೀ. ಈಜಿದ 14ರ...

ಸಮುದ್ರದಲ್ಲಿ 30 ಕಿ.ಮೀ. ಈಜಿದ 14ರ ಹರೆಯದ ಡಿಂಪಲ್ ಸೋನಾಕ್ಷಿ

ಸಿ.ವಿ.ನಾಗರಾಜ್, ಕೋಲಾರಸಿ.ವಿ.ನಾಗರಾಜ್, ಕೋಲಾರ16 Jun 2025 7:19 AM IST
share
ಸಮುದ್ರದಲ್ಲಿ 30 ಕಿ.ಮೀ. ಈಜಿದ 14ರ ಹರೆಯದ ಡಿಂಪಲ್ ಸೋನಾಕ್ಷಿ

ಕೋಲಾರ: ಕೋಲಾರ ಜಿಲ್ಲೆಯ 14ರ ಹರೆಯದ ಬಾಲಕಿಯೊಬ್ಬಳು ಗುಜರಾತ್‌ನ ಸಮುದ್ರದಲ್ಲಿ ಬರೋಬ್ಬರಿ 30 ಕಿ.ಮೀ ಈಜಿ ದಾಖಲೆ ನಿರ್ಮಿಸಿದ್ದಾಳೆ.

ಶ್ರೀನಿವಾಸಪುರ ತಾಲೂಕಿನ ಕುಪ್ಪಹಳ್ಳಿ ಗ್ರಾಮದ ಡಿಂಪಲ್ ಸೋನಾಕ್ಷಿ ಎಂ.ಗೌಡ ಈ ಸಾಧನೆ ಮಾಡಿದ ಹುಡುಗಿ. ಈಕೆ ಶಿಕ್ಷಕ ಮತ್ತು ಕೋಚ್ ಮಂಜುನಾಥ್ ಹಾಗೂ ರೂಪಾ ದಂಪತಿ ಪುತ್ರಿ.

ಸೋನಾಕ್ಷಿ ಈಜು ಸ್ಪರ್ಧೆಯಲ್ಲಿ ಗುಜರಾತ್‌ನ ಅದ್ರಿ ಬೀಚ್‌ನಿಂದ ವೀರವಾಲ್ ಜೆಟ್ಟಿರವರೆಗೆ 30 ಕಿ.ಮೀ. ದೂರವನ್ನು 3 ಗಂಟೆ 33 ನಿಮಿಷ 25 ಸೆಕೆಂಡ್‌ಗಳಲ್ಲಿ ಈಜಿ ಮೊದಲ ಸ್ಥಾನ ಪಡೆದಿದ್ದಾಳೆ.

‘ಈ ಸ್ಪರ್ಧೆಯಲ್ಲಿ ವಿವಿಧ ರಾಜ್ಯಗಳ 16 ಬಾಲಕಿಯರು ಸ್ಪರ್ಧಿಸಿದ್ದರು. ರಾಜ್ಯದಿಂದ ಸ್ಪರ್ಧಿಸಿದ್ದು ನಾನೊಬ್ಬಳೇ. ಸ್ಪರ್ಧಿಗಳಲ್ಲಿ ಎಲ್ಲರಿಗಿಂತ ನಾನೇ ಚಿಕ್ಕವಳು. 13 ನಿಮಿಷ ಬೇಗನೇ ತಲುಪಿ ಹಿಂದಿನ ದಾಖಲೆ ಮುರಿದಿದ್ದೇನೆ. ಮೊದಲ ಸ್ಥಾನ ಪಡೆದಿದ್ದು ತುಂಬಾ ಖುಷಿ ತಂದಿದೆ’ ಎಂದು ಸೋನಾಕ್ಷಿ ಪ್ರತಿಕ್ರಿಯಿಸಿದ್ದಾಳೆ.

ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಕೋಚ್ ನಿಹಾರ್ ಅಮೀನ್ ಅವರ ಡಾಲ್ಫಿನ್ ಅಕಾಡಮಿಯಲ್ಲಿ ಸೋನಾಕ್ಷಿ ಅಭ್ಯಾಸ ನಡೆಸುತ್ತಿದ್ದು, 2024ರ ನವೆಂಬರ್‌ನಲ್ಲಿ ಗುಂಜೂರು ಕೆರೆಯಲ್ಲಿ ನಡೆದ ರಾಷ್ಟ್ರಮಟ್ಟದ 10 ಕಿ.ಮೀ. ಈಜು ಓಪನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಂಕಾಂಗ್‌ನಲ್ಲಿ ನಡೆದ ಏಷ್ಯನ್ ಓಪನ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಳು. ಮಹಾರಾಷ್ಟ್ರದ ವಿಜಯದುರ್ಗದ ಬಳಿ ಸಮುದ್ರದಲ್ಲಿ ನಡೆದ 15 ಕಿ.ಮೀ ಓಪನ್ ಈಜು ಸ್ಪರ್ಧೆ, ಮಾಲ್ವನ್ ಬೀಚ್‌ನಲ್ಲಿ ನಡೆದ 4 ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಗುಜರಾತ್‌ನ ಪೋರಬಂದರ್‌ನಲ್ಲಿ ನಡೆದ 5 ಕಿ.ಮೀ ಮತ್ತು 10 ಕಿ.ಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.

ಈಜಿಗಾಗಿ ಬೆಂಗಳೂರಿನಲ್ಲಿ ಮನೆ

ಡಿಂಪಲ್ ಊರು ಶ್ರೀನಿವಾಸಪುರ ತಾಲೂಕಿನ ಕುಪ್ಪಳ್ಳಿ. ಆದರೆ, ಮಗಳ ಈಜು ಪ್ರತಿಭೆ ಗುರುತಿಸಿದ ತಂದೆ ಮಂಜುನಾಥ್, ಬೆಂಗಳೂರಿನಲ್ಲಿದ್ದರೆ ಮತ್ತಷ್ಟು ಸಾಧನೆ ಮಾಡಬಹುದು ಎಂಬುದನ್ನು ಅರಿತರು. ಹೀಗಾಗಿ, ಬೆಂಗಳೂರಿನಲ್ಲೇ ಬಾಡಿಗೆ ಮನೆ ಮಾಡಿ ಓದಿನ ಜೊತೆಗೆ ಈಜು ತರಬೇತಿಗೆ ಸೇರಿಸಿದ್ದಾರೆ. ಮೂರನೇ ತರಗತಿಯಿಂದ ಡಾಲ್ಫಿನ್ ಅಕ್ವೆಟಿಕ್ ಸೆಂಟರ್‌ನಲ್ಲಿ ತರಬೇತಿ ಪಡೆಯುತ್ತಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ವಿದ್ಯಾನಗರ ಕ್ರಾಸ್‌ನ ಶ್ರೀವೆಂಕಟೇಶ್ವರ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದು, ಓದುವುದರಲ್ಲೂ ಮುಂದಿದ್ದಾಳೆ.

ಮಗಳು ಮೂರನೇ ವಯಸ್ಸಿಗೆ ಈಜು ಕಲಿತಳು. ಕಠಿಣ ಪರಿಶ್ರಮ ಹಾಗೂ ನಿರಂತರ ಅಭ್ಯಾಸದ ಕಾರಣ ಯಶಸ್ಸು ಸಿಕ್ಕಿದೆ. ದೂರದ ಅಂತರದ ಈಜು ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾಳೆ. ಮಗ ಚಿರಾಯು ಕೂಡ ಈಜು ಕಲಿಯುತ್ತಿದ್ದಾನೆ.

-ಮಂಜುನಾಥ್, ಡಿಂಪಲ್ ಸೋನಾಕ್ಷಿಯ ತಂದೆ

share
ಸಿ.ವಿ.ನಾಗರಾಜ್, ಕೋಲಾರ
ಸಿ.ವಿ.ನಾಗರಾಜ್, ಕೋಲಾರ
Next Story
X