ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಹೊಲಿಗೆ ಯಂತ್ರ, ಸೀರೆ ವಿತರಣೆ

ಮಂಗಳೂರು, ಆ.16: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಕಂದಕ್ ಪರಿಸರದಲ್ಲಿ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಬಡ ಕುಟುಂಬಸ್ಥರಿಗೆ ಹೊಲಿಗೆ ಯಂತ್ರ ವಿತರಣೆ, ಸೀರೆ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ತಹಶೀಲ್ದಾರ್ ಟಿ. ರಮೇಶ್ ಬಾಬು, ಮಂಗಳೂರು ನಗರಾಬಿವೃದ್ಧಿ ಪ್ರಾಧಿಕಾರದ ಆಯುಕ್ತ ಮುಹಮ್ಮದ್ ನಝೀರ್, ಮಂಗಳೂರು ಸಂಚಾರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ಕೆ ನಜ್ಮಾ ಫಾರೂಖಿ, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ ಉಪ ನಿರ್ದೇಶಕ ರಾದ ಅಸ್ಮ ಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಲೆಕ್ಕ ಪರಿಶೋಧನಾ ಅಧಿಕಾರಿ ಮುಹಮ್ಮದ್ ತೌಸೀಫ್, ರೊಸಾರಿಯೋ ಚರ್ಚ್ ಧರ್ಮಗುರು ವಂ. ವಲೇರಿಯನ್ ಡಿ ಸೋಜ, ಸ್ಥಳೀಯ ಪಾಲಿಕೆ ಸದಸ್ಯ ಅಬ್ದುಲ್ ಲತೀಫ್, ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಹನುಮಂತ ಕಾಮತ್, ಖ್ಯಾತ ತುಳು ರಂಗಭೂಮಿ ಹಾಗೂ ಚಲನಚಿತ್ರ ನಟ ಸತೀಶ್ ಬಂದಲೆ, ಸಂತ ಅರ್ಸುಲ ಅಂಗನವಾಡಿ ಕಾರ್ಯಕರ್ತೆ ಸುಜಾತ ಶೆಟ್ಟಿ, ಬದ್ರಿಯಾ ಶಾಲೆಯ ಪ್ರಾಂಶುಪಾಲಕಿ ಸೀಮಾ ಉಪಸ್ಥಿತರಿದ್ದರು.





