ವಿಮ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆ.17: ಮಹಿಳಾ ಭದ್ರತೆಯೇ ಸ್ವಾತಂತ್ರ್ಯದ ಅಳತೆಗೋಲು ಎಂಬ ಘೋಷವಾಕ್ಯದೊಂದಿಗೆ ರಾಜ್ಯದ ವಿವಿಧೆಡೆ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ, ಸಭಾ ಕಾರ್ಯಕ್ರಮ, ಮಕ್ಕಳ ಆಟೋಟ ಸ್ಪರ್ಧೆ, ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಕಲ್ಯಾಣ ಯೋಜನೆಗಳ ಮಾಹಿತಿ ನೀಡು ವುದು, ಮಹಿಳೆಯರಿಗೆ ಮನರಂಜನೆ ಸಹಿತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಮಹಿಳಾ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ವಿವಿಧ ಸಂಘಟನೆಗಳ ಮಹಿಳಾ ಮುಖಂಡರು, ಸಾಮಾಜಿಕ ಕಾರ್ಯಕರ್ತೆಯರು, ವೃತ್ತಿಪರ ಹೋರಾಟಗಾರ್ತಿಯರು ಹಾಗೂ ವಿಮ್‌ನ ರಾಜ್ಯ, ಜಿಲ್ಲಾ, ಅಸೆಂಬ್ಲಿ ಮಟ್ಟದ ನಾಯಕಿಯರು ಪಾಲ್ಗೊಂಡಿದ್ದರು.
Next Story





