Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಂಪು ಕಲ್ಲು , ಮರಳು ವಿತರಣೆಗೆ ತುರ್ತು...

ಕೆಂಪು ಕಲ್ಲು , ಮರಳು ವಿತರಣೆಗೆ ತುರ್ತು ಕ್ರಮಕೈಗೊಳ್ಳಲು ಆಗ್ರಹ: ಕಟ್ಟಡ ಕಾರ್ಮಿಕರ ಪ್ರತಿಭಟನಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ18 Aug 2025 6:52 PM IST
share
ಕೆಂಪು ಕಲ್ಲು , ಮರಳು ವಿತರಣೆಗೆ ತುರ್ತು ಕ್ರಮಕೈಗೊಳ್ಳಲು ಆಗ್ರಹ: ಕಟ್ಟಡ ಕಾರ್ಮಿಕರ ಪ್ರತಿಭಟನಾ ಪ್ರದರ್ಶನ

ಮಂಗಳೂರು, ಆ.18: ಮೂರುವರೆ ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವ ಸೃಷ್ಟಿಯಾಗಿದೆ. ಜಿಲ್ಲಾಡಳಿತದ ಕಠಿಣ ಕ್ರಮಗಳು ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ಹೊಡೆತವನ್ನು ನೀಡಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಕೆ.ಯಾದವ ಶೆಟ್ಟಿ ಹೇಳಿದ್ದಾರೆ.

ಮಂಗಳೂರು ನಗರದ ಮಿನಿ ವಿಧಾನ ಸೌಧದ ಮುಂದೆ ಸೋಮವಾರ ಸಿಐಟಿಯು ಮತ್ತು ಎಐಟಿಯುಸಿ ನೇತೃತ್ವದ ಕಟ್ಟಡ ಕಾರ್ಮಿಕರ ಸಂಘಟನೆಯ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬ ಸಂಪೂರ್ಣವಾಗಿ ಬೀದಿ ಪಾಲಾಗಿದ್ದು, ಇದಕ್ಕೆ ಕರ್ನಾಟಕ ರಾಜ್ಯ ಸರಕಾರವು ನೇರ ಹೊಣೆಯಾಗಿದೆ. ಅಕ್ರಮ ದಂಧೆ ತಡೆಯುವ ಕ್ರಮವು ಸ್ವಾಗತಾರ್ಹವಾಗಿದ್ದರೂ ಅದರಿಂದ ಸೃಷ್ಟಿಯಾಗಿರುವಂತಹ ಬೇರೆ ಬೇರೆ ಸಮಸ್ಯೆಗಳಿಗೆ ಸರಕಾರದಿಂದ ಯಾವುದೇ ರೀತಿಯ ಪರಿಹಾರ ಇಲ್ಲದಿರುವುದು ಖಂಡನೀಯ ಎಂದರು.

ಕಟ್ಟಡ ಕಾರ್ಮಿಕರ ರಂಗದ ಕೆಂಪು ಕಲ್ಲಿನ ಕೋರೆ ಪರವಾನಿಗೆ ಪದ್ಧತಿಯಲ್ಲಿ ಸರಳೀಕರಣ ಮತ್ತು ನ್ಯಾಯಯುತ ವಾಗಿರಲಿ. ಕೇರಳದ ಮಾದರಿಯಲ್ಲಿ ರಾಜಧನ ಪದ್ಧತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾರಿಯಾಗಲಿ, ಕರಾವಳಿಗೆ ಮರಳು ನೀತಿ ಜಾರಿಯಾಗಲು ಕರ್ನಾಟಕ ರಾಜ್ಯಸರಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮಾಸಿಕ 10 ಸಾವಿರ ರೂ. ಪರಿಹಾರಕ್ಕೆ ಆಗ್ರಹ: ಕಟ್ಟಡ ಮತ್ತು ಕೋರೆ ಕಾರ್ಮಿಕ ಸಂಘಟನೆ( ಎಐಟಿಯುಸಿ) ಉಪಾಧ್ಯಕ್ಷ ಬಿ.ಶೇಖರ್ ಮೂರುವರೆ ತಿಂಗಳಿನಿಂದ ಕೆಲಸವಿಲ್ಲದೆ ಕಂಗಾಲಾಗಿರುವ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಮಾಸಿಕವಾಗಿ ರೂ.10,000 ನಂತೆ ಪರಿಹಾರ ಧನವನ್ನು ಸಮಸ್ಯೆ ಇತ್ಯರ್ಥವಾಗುವ ತನಕ ನೀಡಬೇಕೆಂದು ಒತ್ತಾಯಿಸಿದರು.

*ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ: ಪ್ರಾಕೃತಿಕ ಸಂಪನ್ಮೂಲಗಳಿದ್ದರೂ ಅಘೋಷಿತ ಕೆಂಪು ಕಲ್ಲು

ಮತ್ತು ಮರಳು ಅಭಾವದಿಂದಾಗಿ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಅಂಗಡಿ- ಮುಗ್ಗಟ್ಟು, ಲಾರಿ ಮಾಲಕ ಚಾಲಕರು ಮತ್ತು ಆರ್ಥಿಕ ರಂಗ ತೀವ್ರವಾಗಿ ಕುಸಿದಿದೆ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಮರಳು ಸಮಸ್ಯೆ ಇತ್ಯರ್ಥವನ್ನು ಮಾಡದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕಾರ್ಮಿಕ ಸಂಘಟನೆಗಳು ಸಮಾನ ಮನಸ್ಕ ಸಂಘಟನೆ ಗಳೊಂದಿಗೆ ಸೇರಿ ತೀವ್ರವಾದ ಪ್ರತಿಭಟನೆಯನ್ನು ಸಂಘಟಿಸುವುದು ಅನಿವಾರ‌್ಯವಾಗಲಿದೆ ಎಂದು ಕಟ್ಟಡ ಕಾರ್ಮಿಕ ಸಂಘಟನೆಯ ಸಿಐಟಿಯುವಿನ ಪ್ರಧಾನ ಕಾರ್ಯದರ್ಶಿ ವಸಂತ ಆಚಾರಿಯವರು ಎಚ್ಚರಿಕೆ ನೀಡಿದರು.

ಮರಳು ಮತ್ತು ಕೆಂಪು ಕಲ್ಲಿನ ಸಮಸ್ಯೆಯನ್ನು ತೀವ್ರಗತಿಯಲ್ಲಿ ಇತ್ಯರ್ಥ ಮಾಡಬೇಕೆಂದು ಕಟ್ಟಡ ಕಾರ್ಮಿಕರ ಸಂಘ ಎಐಟಿಯುಸಿ ಇದರ ಪ್ರಧಾನ ಕಾರ್ಯದರ್ಶಿ ಕರುಣಾಕರ ಮಾರಿಪಳ್ಳ ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ಖಜಾಂಚಿ ಯೋಗೀಶ್ ಜಪ್ಪಿನಮೊಗರು, ಮುಂದಾಳುಗಳಾದ ಜನಾರ್ದನ ಕುತ್ತಾರ್, ಶಂಕರ ಮೂಡಬಿದರೆ, ಚಂದ್ರಹಾಸ ಪಿಲಾರ್, ವಿಶ್ವನಾಥ ಸುಳ್ಯ, ನೋಣಯ್ಯ ಗೌಡ ಕೈಕಂಭ, ರಾಮಚಂದ್ರ ಪಜೀರು, ಕಟ್ಟಡ ಮತ್ತು ಕೋರೆ ಕಾರ್ಮಿಕರ ಸಂಘ ಎಐಟಿಯುಸಿ ಮುಂದಾಳುಗಳಾದ ಎಚ್.ವಿ.ರಾವ್, ಕರುಣಾಕರ ಮಾರಿಪಳ್ಳ, ಶೇಖರ್ ಬಿ, ಸುರೇಶ್ ಬಿ, ವಿ.ಕುಕ್ಯಾನ್ ಮುಂತಾದವರು ವಹಿಸಿದ್ದರು.

ಎಐಟಿಯುಸಿ ಸಂಘಟನೆಯ ಸುರೇಶ್ ಬಂಟ್ವಾಳ ಸ್ವಾಗತಿಸಿ , ಸಿಐಟಿಯುವಿನ ರವಿಚಂದ್ರ ಕೊಂಚಾಡಿ ವಂದಿಸಿದರು.

ಪ್ರಾರಂಭದಲ್ಲಿ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದ ತನಕ ಕಟ್ಟಡ ಕಾರ್ಮಿಕರ ಬೃಹತ್ ಮೆರವಣಿಗೆ ನಡೆಯಿತು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X