Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೊಲೀಸ್ ಇಲಾಖೆಯನ್ನು ಮುಂದಿಟ್ಟು ಹಿಂದೂ...

ಪೊಲೀಸ್ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಬ್ರಿಜೇಶ್ ಚೌಟ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Aug 2025 11:07 PM IST
share
ಪೊಲೀಸ್ ಇಲಾಖೆಯನ್ನು ಮುಂದಿಟ್ಟು ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಬ್ರಿಜೇಶ್ ಚೌಟ ಆರೋಪ

ಹೊಸದಿಲ್ಲಿ, ಆ.20: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಮುಂತಾದ ಶ್ರೀಮಂತ ಆಚರಣೆಗೆ ಹೆಸರುವಾಸಿಯಾಗಿದೆ. ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶದಂಥ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತವೆ. ಆದರೆ, ಪೊಲೀಸರು ಇತ್ತೀಚೆಗೆ ಹಲವೆಡೆ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆ ಮಾಡಿರುವುದಕ್ಕೆ ಆಯೋಜಕರು ಹಾಗೂ ಸೌಂಡ್ ಸಿಸ್ಟಮ್‌ನವರ ಮೇಲೆ ಪ್ರಕರಣ ದಾಖಲಿಸಿರುವುದು ನಿಜಕ್ಕೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಬ್ಬ-ಹರಿದಿನಗಳನ್ನು ಸಂತೋಷ, ಭಕ್ತಿ-ಭಾವದಿಂದ ಆಚರಿಸುತ್ತಿರಬೇಕಾದರೆ, ಪೊಲೀಸರಿಗೆ ಈ ರೀತಿ ಏಕಾಏಕಿ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ರೀತಿಯ ನಿಯಮಗಳನ್ನು ರೂಪಿಸುವುದಕ್ಕೆ ನಿರ್ದೇಶನಗಳನ್ನು ಕೊಟ್ಟವರು ಯಾರು ಎಮದು ಪ್ರಶ್ನಿಸಿದ್ದಾರೆ.

ಪೊಲೀಸರು ಈಗಾಗಲೇ ಕೆಲವೆಡೆ ಧ್ವನಿವರ್ಧಕ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದು, ಅವರ ಸೌಂಡ್ ಸಿಸ್ಟಮ್ ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಅವರೆಲ್ಲ ರೋಸಿ ಹೋಗಿದ್ದಾರೆ. ಅಲ್ಲದೆ, ಇನ್ನುಮುಂದೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸುವುದಿಲ್ಲ ಎಂದು ಹೇಳಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಅವರು ಈ ಹಿಂದೆ ಜಿಲ್ಲೆಗೆ ಬಂದಾಗಲೂ ಈ ವಿಚಾರದ ಬಗ್ಗೆ, ಇಲ್ಲಿನ ಆಚರಣೆಗಳ ಬಗ್ಗೆ ಮನವರಿಕೆ ಮಾಡಿ ಶಾಸಕರೊಡಗೂಡಿ ಈ ಬಗ್ಗೆ ಚರ್ಚೆ ನಡೆಸಿದ್ದೆವು. ಇಂದು ನಮ್ಮ ಭಾಗದ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ ಅವರು ಕೂಡ ಈ ಬಗ್ಗೆ ಸದನದಲ್ಲಿಯೂ ಧ್ವನಿಯೆತ್ತಿದ್ದಾರೆ. ಹಿಂದೂ ಸಮಾಜದ ಧಾರ್ಮಿಕ ಭಾವನೆಗಳನ್ನು ಗೌರವಿಸಿ, ಈ ಮೊದಲಿನಂತೆ ನಿರ್ಬಂಧಗಳಿಲ್ಲದೆ ಹಬ್ಬಗಳನ್ನು ಆಚರಿಸಲು ಅವಕಾಶ ನೀಡಬೇಕು. ಅದುಬಿಟ್ಟು, ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮುಂದುವರಿಸಿದರೆ ಅದರಿಂದ ಉಂಟಾಗುವ ಪರಿಣಾಮಗಳಿಗೆ ಸಿದ್ದರಾಮಯ್ಯ ಸರಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಚೌಟ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X