ಕೆಐಒಸಿಎಲ್ ಗೆ ಗಣಿಗಾರಿಕೆ ನಡೆಸಲು ಅವಕಾಶ ನೀಡಬೇಕು: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಕುದುರೆ ಮುಖ ಕಬ್ಬಿಣದ ಅದಿರು ಕಂಪೆನಿಗೆ ರಾಜ್ಯದಲ್ಲಿ ಅದಿರು ತೆಗೆಯಲು ಅವಕಾಶ ನೀಡಬೇಕು ಎಂದು ಸಂಸದ ಬ್ರಿಜೇಶ್ ಚೌಟ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಕೆಐಒಸಿಎಲ್ ಗಣಿಗಾರಿಕೆ ನಡೆಸಲು ರಾಜ್ಯ ಸರಕಾರಕ್ಕೆ ಹಣ ಪಾವತಿಸಿದೆ.ಆದುದರಿಂದ ರಾಜ್ಯ ಸರಕಾರ ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಂಡರೆ ಕೆಐಒಸಿಎಲ್ ಗಣಿಗಾರಿಕೆ ನಡೆಸಲು ಸಹಕಾರ ನೀಡಿದಂತಾಗುತ್ತದೆ ಎಂದು ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರ ಸ್ವಾಮಿ,ಹಾಗೂ ಹಣಕಾಸು ಸಚಿವರ ಜೊತೆ ಚರ್ಚೆ ನಡೆಸಿರುವುದಾಗಿ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಈ ಬಾರಿಯ ಅಧಿವೇಶನದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸುಮಾರು 34 ವಿಷಯಗಳ ಬಗ್ಗೆ ಪ್ರಶ್ನೆ ಮಾಡಿರುತ್ತೇನೆ. ಬಹಳ ಮುಖ್ಯ ವಾಗಿ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆ, ಅಡಿಕೆಗೆ ಪರ್ಯಾಯ ಕೃಷಿಯಾಗಿ ಕಾಫಿ ಬೆಳೆಗೆ ಪ್ರೋತ್ಸಾಹ ನೀಡುವುದು.ಅಡಿಕೆಯ ಸೇವನೆಯ ಬಗ್ಗೆ ಸಂಶೋಧನೆ ನಡೆಸಲು ನೆರವು,ವಿದೇಶದಿಂದ ಆಮದಾಗಿ ಬರುತ್ತಿರುವ ಅಡಿಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೆರಿಟೈಮ್ ಯೂನಿವರ್ಸಿಟಿ ಬೇಡಿಕೆ,ಐಟಿ ಸಚಿವರ ಬಳಿ ಡೇಟಾ ಸೆಂಟರ್ ಮತ್ತು ಕೇಬಲ್ ಲ್ಯಾಂಡಿಂಗ್ ಸ್ಟೇಷನ್ ,ಜಿಲ್ಲೆಯಲ್ಲಿ ಆರಂಭಿಸಬೇಕೆನ್ನುವ ಬೇಡಿಕೆಯನ್ನು ಮಂಡಿಸಲಾಗಿದೆ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯ ಎಐ ಮಿಶನ್ ಯೋಜನೆಯಲ್ಲಿ ಮಂಗಳೂರನ್ನು ಸೇರಿಸಬೇಕೆಂದು ಆಗ್ರಹಿಸಿರುವುದಾಗಿ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪದಾಧಿಕಾರಿಗಳಾದ ರವೀಂದ್ರಶೆಟ್ಟಿ ಉಳಿದೊಟ್ಟು,ಪೂಜಾ ಪೈ,ರಾಜ ಗೋಪಾಲ ರೈ,ಸತೀಶ್ ಪ್ರಭು,ನಂದನ ಮಲ್ಯ, ಮನೋಹರ ಶೆಟ್ಟಿ,ವಸಂತ ಪೂಜಾರಿ ಮೊದಲಾದ ವರು ಉಪಸ್ಥಿತರಿದ್ದರು.
"ಸೌಜನ್ಯ ಪ್ರಕರಣದ ಮರು ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿಲ್ಲ"
ಧರ್ಮಸ್ಥಳದ ಪ್ರಕರಣದಲ್ಲಿ ಎಸ್ಐಟಿತನಿಖೆಯನ್ನು ಪ್ರಥಮವಾಗಿ ಬಿಜೆಪಿ ಸ್ವಾಗತಿಸಿದೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ನಮ್ಮ ಶಾಸಕರು ಆಗ್ರಹಿಸಿದ್ದರು ಬಿಜೆಪಿ ವಿರೋಧ ವ್ಯಕ್ತ ಪಡಿಸಿಲ್ಲ. ಆದರೆ ಈಗ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಧರ್ಮಸ್ಥಳದ ಮೇಲೆ ಆಧಾರ ರಹಿತ ಆರೋಪಮಾಡಿ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುತ್ತಿ ರುವ ಚಟುವಟಿಕೆಗಳನ್ನು ಬಿಜೆಪಿ ವಿರೋಧಿ ಸುತ್ತದೆ ತನಿಖೆಗೆ ಅಡ್ಡಿ ಪಡಿಸುತ್ತಿಲ್ಲ ಎಂದು ಬಿಜೆಪಿ ನಿಲುವಿನ ಕುರಿತು ಬ್ರಿಜೇಶ್ ಚೌಟ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.







