Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು...

ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದರೆ ಯಶಸ್ಸು:ಡಾ.ಎಂ.ಮೋಹನ ಆಳ್ವ

ವಾರ್ತಾಭಾರತಿವಾರ್ತಾಭಾರತಿ23 Aug 2025 9:07 PM IST
share
ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದರೆ ಯಶಸ್ಸು:ಡಾ.ಎಂ.ಮೋಹನ ಆಳ್ವ
ಡಾ.ಎಂ.ಮೋಹನ ಆಳ್ವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್

ಮಂಗಳೂರು: ಎಲ್ಲ ಜಾತಿ, ಮತ, ಧರ್ಮದವರನ್ನು ಗೌರವಿಸುವ ಸಾಮರಸ್ಯದ ಮನೋಭಾವನೆ ಬೆಳೆಸಿಕೊಂಡಿ ರುವುದೇ ಬದುಕಿಗೆ ಶಕ್ತಿ ತುಂಬಿದೆ. ಉತ್ತಮ ಸಂಸ್ಕಾರದ ಜತೆಗೆ ಸಾಮರ್ಥ್ಯ ಅರಿತು ದುಡಿದ ಪರಿಣಾಮ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್‌ನ ಚೇರ್ಮನ್ ಡಾ.ಎಂ.ಮೋಹನ ಆಳ್ವ ಹೇಳಿದ್ದಾರೆ.

ನಗರದ ಎ.ಜೆ. ಗ್ರ್ಯಾಂಡ್ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ನ 29ನೇ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್ ಸ್ವೀಕರಿಸಿ ಅವರು ಮಾತನಾಡಿದರು.

ಬಾಲ್ಯದಿಂದಲೇ ಕಲೆ ಮತ್ತು ಕ್ರೀಡೆಯಲ್ಲಿ ಆಸಕ್ತಿ ಹೊಂದಿದೆ. ಸಾಂಸ್ಕೃತಿಕ ಕ್ಷೇತ್ರ ಬದುಕಿಗೆ ಒಳ್ಳೆಯ ಮೌಲ್ಯಗಳನ್ನು ನೀಡಿದರೆ. ಕ್ರೀಡೆಯ ಮೇಲಿನ ಆಸಕ್ತಿ ಹೋರಾಟದ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಯಿತು ಎಂದು ಡಾ.ಆಳ್ವ ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಡಾ.ಎಂ.ಶಾಂತಾರಾಮ ಶೆಟ್ಟಿ ಮಾತನಾಡಿ ‘ ಡಾ.ಎಂ.ಮೋಹನ ಆಳ್ವ ಅವರ ಸಾಧನೆ ಬಂಟ ಸಮಾಜಕ್ಕೆ ಪ್ರೇರಣಾ ಶಕ್ತಿಯಾಗಿದೆ’ ಎಂದರು.

ಹಿರಿಯ ಯಕ್ಷಗಾನ ಕಲಾವಿದ ಸಂಜಯ ಕುಮಾರ್ ಶೆಟ್ಟಿ ಗೋಣಿಬೀಡು ಅವರಿಗೆ ದಿ.ಡಾ.ಡಿ.ಕೆ.ಚೌಟ ದತ್ತಿನಿಧಿ ಪ್ರಶಸ್ತಿ, ಕೃಷಿ ಕ್ಷೇತ್ರದ ಸಾಧನೆಗಾಗಿ ಇಂದಿರಾ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ ೨೪ನೇ ರ್ಯಾಂಕ್ ಪಡೆದ ಸಿಎ ನಿಶ್ಚಲ್ ರೈ ಅವರಿಗೆ ಸಿಎ ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಸಿಎ ರಕ್ಷಾ. ಆರ್.ಶೆಟ್ಟಿ ಅವರಿಗೆ ಸಿಎ ಗೋಪಾಲ್.ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ವಿತರಿಸಲಾಯಿತು.

ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ , ಉಪಾಧ್ಯಕ್ಷ ಕೆ.ಎಸ್.ಹೆಗ್ಡೆ, ಯೋಜನಾ ನಿರ್ದೇಶಕ ಡಾ.ಬಿ. ಸಂಜೀವ ರೈ, ಖಜಾಂಚಿ ಸಿಎ ಸುದೇಶ್ ಕುಮಾರ್ ರೈ , ಮೀನಾಕ್ಷಿ ಆಳ್ವ ಉಪಸ್ಥಿತರಿದ್ದರು.

ಪಳ್ಳಿ ಕಿಶನ್ ಹೆಗ್ಡೆ , ಕೆ.ಎಂ.ಶೆಟ್ಟಿ ಮತ್ತು ಜ್ಯೋತಿ ಪ್ರಸಾದ್ ಹೆಗ್ಡೆ ಸನ್ಮಾನಿತರನ್ನು ಪರಿಚಯಿಸಿದರು. ಜೈರಾಜ್.ಬಿ.ರೈ ವಂದಿಸಿದರು. ಕಳ್ಳಿಗೆ ತಾರನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X