Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ...

ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ 'ಭೀಮ ಸೌಧ' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ23 Aug 2025 10:33 PM IST
share
ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಭೀಮ ಸೌಧ ಉದ್ಘಾಟನೆ

ಉಳ್ಳಾಲ : ಬಿ ಆರ್ ಅಂಬೇಡ್ಕರ್ ‌ತತ್ವ ಆದರ್ಶ ಗಳನ್ನು ಯುವ ಪೀಳಿಗೆ ವರ್ಗಾಯಿಸಬೇಕು.ಅವರ ವ್ಯಕ್ತಿತ್ವದ ಅರ್ಧದಷ್ಟು ಪಾಲು ನಾವು ಜೀವನದಲ್ಲಿ ಅಳವಡಿಸಿಕೊಂಡು ಬರಬೇಕುಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು

ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ದ.ಕ.ಜಿ.ಪಂ., ಉಳ್ಳಾಲ ತಾ.ಪಂ.ಹಾಗೂ ಮುನ್ನೂರು ಗ್ರಾ.ಪಂ. ಇವುಗಳ ಸಂಯುಕ್ತ ಆಶ್ರಯದಲ್ಲಿ ಕುತ್ತಾರ್ ರಾಣಿಪುರ ದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ 'ಭೀಮ ಸೌಧ' ಉದ್ಘಾಟನಾ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದು ನಾವು ಜತೆಯಾಗಿ ಹೋಗಲು ,ದೇಶದ ವಿವಿಧ ಕಡೆಗಳಿಗೆ ಓಡಾಡಲು ಅಂಬೇಡ್ಕರ್ ಅವರ ಸಂವಿಧಾನ ಕಾರಣ. ಎಲ್ಲಾ ಸಮಸ್ಯೆ ಗಳಿಗೆ ಸಂವಿಧಾನ ಔಷಧಿ ಆಗಿದೆ ಎಂದು ಹೇಳಿದರು.

ಈ ಕಟ್ಟಡದ ಕಾಮಗಾರಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಈ ಸಂದರ್ಭದಲ್ಲಿ ಯಾರೂ ಕೂಡ ಈ ಕಡೆ ಗಮನ ಕೊಟ್ಟಿಲ್ಲ. ಈ ಕಟ್ಟಡದ ಕಾಮಗಾರಿ ಈಗ ಪೂರ್ಣ ಆಗಿದೆ. ಅಭಿವೃದ್ಧಿ ಕಾಮಗಾರಿ ಸ್ಥಳೀಯ ಜನಪ್ರತಿನಿಧಿಗಳ ಜವಾಬ್ದಾರಿ. ಪಂಚಾಯತ್ ಯಾವುದೇ ಕಾರ್ಯ ಮಾಡುವಾಗ ಸ್ಥಳೀಯರನ್ನು ವಿಶ್ವಾಸ ತೆಗೆದು ಕೊಳ್ಳಬೇಕು ಎಂದು ಮುನ್ನೂರು ಗ್ರಾ.ಪಂ. ಪಿಡಿಒ , ಸಿಬ್ಬಂದಿ ಗೆ ಸೂಚನೆ ನೀಡಿದರು.

ಕೀ ಸಮಸ್ಯೆ ಇತ್ಯರ್ಥ: ದಲಿತರ ಕಾಲೋನಿಯಲ್ಲಿ ನಿರ್ಮಾಣ ಆಗಿರುವ ಅಂಬೇಡ್ಕರ್ ಸಮುದಾಯ ಭವನದ ಕೀಲಿಕೈ ನಮಗೆ ಕೊಡಬೇಕು ಎಂಬುದು ದಲಿತ ಮುಖಂಡರು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಾತುಕತೆ ಕೂಡ ನಡೆದಿತ್ತು. ಈ ವಿಚಾರದಲ್ಲಿ ನಮ್ಮನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ದಲಿತ ಮುಖಂಡರು ದೂರ ನಿಂತು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಸ್ಪೀಕರ್ ಯುಟಿ ಖಾದರ್ ಅವರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ದಲಿತ ಮುಖಂಡ ಮಾಯಿಲ ಅವರ ಮೂಲಕವೇ ಭವನದ ಉದ್ಘಾಟನೆ ನೆರವೇರಿಸಿದರು.

ಕಟ್ಟಡದ ಮೇಲುಸ್ತುವಾರಿ ವಿಚಾರದಲ್ಲಿ ಒಬ್ಬರಿಗೆ ಜವಾಬ್ದಾರಿ ನೀಡಿದರೆ ನಿರ್ವಹಣೆ ಕಾಮಗಾರಿ ಸಮಸ್ಯೆ ಆಗುತ್ತದೆ. ಇದಕ್ಕೊಂದು ಸಮಿತಿ ಆಗಬೇಕು. ಈ ಕಟ್ಟಡದ ಮೇಲೆ ಛಾವಣಿ ಅಳವಡಿಸಿ ಸಭಾಂಗಣ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಈ ಕಾರ್ಯಕ್ರಮ ದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಗೇರು ನಿಗಮದ ಅಧ್ಯಕ್ಷ ಮಮತಾ ಗಟ್ಟಿ, ಮಾಜಿ ಜಿ.ಪಂ.ಸದಸ್ಯೆ ಧನಲಕ್ಷ್ಮಿ ಗಟ್ಟಿ, ವಿಲ್ಪ್ರೇಡ್ ಸೋಜ ಮಾಯಿಲ ,ಜಯಪ್ರಕಾಶ್, ಮುನ್ನೂರು ಗ್ರಾ.ಪಂ. ಅಧ್ಯಕ್ಷ ರೆಹನಾಭಾನು, ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ , ಉಳ್ಳಾಲ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಗುರುದತ್ ಜಿ.ಪಂ. ಯೋಜನಾ ನಿರ್ದೇಶಕ ಜಯರಾಮ್, ಮಾದಪ್ಪ, ತಾ.ಪಂ.ಮಾಜಿ ಸದಸ್ಯ ವಿಲ್ಮಾ, ಹಿರಿಯಾ ಜನಪದ ಕಲಾವಿದೆ ತಿಮ್ಮಕ್ಕ, ಸುರೇಖಾ,ತಾ.ಪಂ.ಗ್ಯಾರಂಟಿ ಸಮಿತಿ ಅಧ್ಯಕ್ಷ ರಫೀಕ್ ಮತ್ತಿತರರು ಉಪಸ್ಥಿತರಿದ್ದರು.

ಮುನ್ನೂರು ಗ್ರಾ.ಪಂ. ಸದಸ್ಯ ಮುಸ್ತಫಾ ಪ್ರಾಸ್ತಾವಿಕವಾಗಿ ಮಾತನಾಡಿದರು.ಪಿಡಿಒ ಶ್ರೀಕಾಂತ್ ಸಿಂತಿಗೇರ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X