ಉಳ್ಳಾಲ: ನಗರಸಭೆ ಸ್ಥಾಯಿ ಸಮಿತಿ ವಿಸ್ತರಣೆ

ಉಳ್ಳಾಲ: ಇಲ್ಲಿನ ನಗರ ಸಭೆಯ ಸ್ಥಾಯಿ ಸಮಿತಿಯನ್ನು ಸರ್ಕಾರ ದ ನಿರ್ದೇಶನ ಮೇರೆಗೆ ವಿಸ್ತರಣೆ ಮಾಡಿ ನೂತನ ಸಮಿತಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ನಗರ ಸಭೆ ಅಧ್ಯಕ್ಷ ಶಶಿಕಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಥಾಯಿ ಸಮಿತಿ ವಿಸ್ತರಣೆ ಮಾಡಿ ತೆರಿಗೆ ನಿರ್ದರಣೆ ಹಣಕಾಸು ಮತ್ತು ಅಫೀಲುಗಳ ಸ್ಥಾಯಿಸಮಿತಿ,ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ,ಪಟ್ಟಣ ಯೋಜನೆ ಮತ್ತು ಪುರೋಭಿವೃದ್ಧಿ ಸ್ಥಾಯಿಸಮಿತಿ, ಲೆಕ್ಕಪತ್ರಗಳ ಸ್ಥಾಯಿ ಸಮಿತಿಗಳನ್ನು ರಚಿಸಲಾಯಿತು.
ತೆರಿಗೆ ನಿರ್ದರಣೆ ಹಣಕಾಸು ಮತ್ತು ಅಫೀಲುಗಳ ಸ್ಥಾಯಿಸಮಿತಿಯ ಅಧ್ಯಕ್ಷರಾಗಿ ಮಹಮ್ಮದ್ ಅಶ್ರಫ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಖಲೀಲ್ ಇಬ್ರಾಹಿಂ,ಪಟ್ಟಣ ಯೋಜನೆ ಮತ್ತು ಪುರೋಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಭಾರತಿ,ಲೆಕ್ಕಪತ್ರಗಳ ಸ್ಥಾಯಿಸಮಿತಿಯ ಅಧ್ಯಕ್ಷ ರಾಗಿ ವೀಣಾ ಶಾಂತಿ ಡಿಸೋಜ ಅವರನ್ನು ನೇಮಕ ಮಾಡಲಾಗಿದೆ.
ನಗರಸಭೆ ಪೌರಾಯುಕ್ತ ನವೀನ್ ಹೆಗ್ಡೆ, ಉಪಾಧ್ಯಕ್ಷ ಸಪ್ನಾ ಹರೀಶ್, ತೆರಿಗೆ ವಿಭಾಗದ ನಿರೀಕ್ಷಕ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.







