ಧರ್ಮಸ್ಥಳ ಪ್ರಕರಣ: ಕೇರಳದ ಯೂಟ್ಯೂಬರ್ ಗೆ ಎಸ್ಐಟಿ ನೋಟಿಸ್

ಫೈಲ್ ಫೋಟೋ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಯುಟ್ಯೂಬರ್ ಒಬ್ಬರಿಗೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.
ಕೇರಳದ ಯೂಟ್ಯೂಬರ್ ಮನಾಫ್ ಎಂಬವರಿಗೆ ತನಿಖೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಎಸ್ಐಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಹಲವು ವೀಡಿಯೊಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಮನಾಫ್, ತನ್ನ ಯೂಟ್ಯೂಬ್ ನಲ್ಲಿ ಬುರುಡೆ ತೆಗೆಯುವ ವಿಡಿಯೋ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ ತಿಳಿದು ಬಂದಿದೆ.
Next Story





