ಪಣಂಬೂರು: ಮಾದಕ ವಸ್ತು ಸೇವನೆ ಪ್ರಕರಣ: ಇಬ್ಬರ ಬಂಧನ

ಪಣಂಬೂರು: ತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಜೋಕಟ್ಟೆ ನಿವಾಸಿ ಹುಸೇನ್ (21), ಜೋಕಟ್ಟೆ ಪೊರ್ಕೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮುಫೀಝ್ (28) ಬಂಧಿತರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜ್ಞಾನಶೇಖರ ಅವರು ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಸಮಯ ಸಂಜೆ 6ಗಂಟೆಯ ಸುಮಾರಿಗೆ ತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವನೆ ಮಾಡಿ ಅದರ ನಶೆಯಲ್ಲಿ ಇದ್ದಂತೆ ಕಂಡು ಬಂದಿದ್ದ ಹುಸೇನ್ ಮತ್ತು ಮುಫೀಝ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಮಾಧಕ ವಸ್ತು ಸೇವಿಸಿರುವುದು ದೃಢ ಪಟ್ಟದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಬಂಧಿಸಿ ಎನ್.ಡಿ.ಪಿ.ಎಸ್ ಕಲಂ 27(a) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story





