ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಂಗಳೂರು: ಸಂಘದಿಂದ ಪ್ರತೀ ವರ್ಷ ವಿದ್ಯಾರ್ಥಿ ವೇತನ, ಕಾಯಿಲೆ ಪೀಡಿತರು, ನೊಂದ ಮೀನುಗಾರರ ಕುಟುಂಬಕ್ಕೆ ಧನ ಸಹಾಯ ನೀಡಲಾಗುತ್ತಿದೆ. ಈ ಬಾರಿ ಸಾಧಕ 50 ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂ.ನೊಂದಿಗೆ ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹಿಸಲಾಗಿದೆ ಎಂದು ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಹಮ್ಮದ್ ಮುಸ್ತಫ ಮಲಾರ್ ಹೇಳಿದ್ದಾರೆ.
ಮಂಗಳೂರು ಉತ್ತರ ಧಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಆಶ್ರಯದಲ್ಲಿ 'ಬಹರ್ ಎ ನೂರ್' ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಜಾತಿ, ಧರ್ಮ ನೋಡದೆ ಕಿಡ್ನಿ ರೋಗಿಗಳ ಡಯಾಲಿಸಿಸ್ ಗೆ ಮಾಸಿಕ ಸಹಾಯಧನ, ಕ್ಯಾನ್ಸರ್ ಹಾಗೂ ಇತರ ಮಾರಕ ಕಾಯಿಲೆ ಇರುವವರನ್ನು ಗುರುತಿಸಿ ಸಹಾಯಧನ ನೀಡುವ ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಪುಸ್ತಕ ವಿತರಿಸುವ ಮೂಲಕ ಸಂಘ ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಸಲಹೆಗಾರ, ಲೆಕ್ಕ ಪರಿಶೋಧಕ ಪ್ರವೀಣ್ ಕುಮಾರ್ ಶೆಟ್ಟಿ ಮಾತನಾಡಿದರು. ಸಂಘದ ಅಧ್ಯಕ್ಷ ಜೆ.ಮಹಮ್ಮದ್ ಇಸ್ಹಾಕ್ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ನಿರ್ದೇಶಕರಾದ ಯು.ಟಿ.ಅಹ್ಮದ್ ಶರೀಫ್, ಬಿ.ಇಬ್ರಾಹೀಂ ಖಲೀಲ್, ಎಸ್.ಎಂ.ಇಬ್ರಾಹೀಂ, ಟಿ.ಎಚ್.ಹಮೀದ್, ಮುಹಮ್ಮದ್ ಅಶ್ರಫ್, ಎ.ಎಂ.ಕೆ.ಮುಹಮ್ಮದ್ ಇಬ್ರಾಹೀಂ, ಬಿ.ಮುಹಮ್ಮದ್ ಶಾಲಿ, ಎಂ.ಎ.ಗಫೂರ್, ಎಸ್.ಕೆ.ಇಸ್ಮಾಯೀಲ್, ಎ.ಎನ್.ಆರ್.ಅನ್ವರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಅಬ್ದುಲ್ ಲತೀಫ್ ಮತ್ತಿತರರು ಉಪಸ್ಥಿತರಿದ್ದರು.







