Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೆನ್ಲಾಕ್ ಕ್ಯಾಥ್‌ಲ್ಯಾಬ್ ಶೀಘ್ರ...

ವೆನ್ಲಾಕ್ ಕ್ಯಾಥ್‌ಲ್ಯಾಬ್ ಶೀಘ್ರ ಆರಂಭಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Sept 2025 7:22 PM IST
share
ವೆನ್ಲಾಕ್ ಕ್ಯಾಥ್‌ಲ್ಯಾಬ್ ಶೀಘ್ರ ಆರಂಭಕ್ಕೆ ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಹೃದ್ರೋಗಕ್ಕೆ ಸಂಬಂಧಪಟ್ಟ ಉನ್ನತ ಚಿಕಿತ್ಸೆ ಒದಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣ ಗೊಂಡಿರುವ ಕ್ಯಾಥ್‌ಲ್ಯಾಬ್ ಘಟಕವನ್ನು ಶೀಘ್ರದಲ್ಲಿ ಕಾರ್ಯಚರಣೆಗೊಳಿಸುವಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಗುರುವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೆನ್ಲಾಕ್ ಹೊಸ ಸರ್ಜಿಕಲ್ ಕಟ್ಟಡದ ತಳ ಅಂತಸ್ತಿನಲ್ಲಿ ಸುಸಜ್ಜಿತ ಕ್ಯಾಥ್‌ಲ್ಯಾಬ್ ನಿರ್ಮಾಣಗೊಂಡಿದ್ದು, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ತಜ್ಞ ವೈದ್ಯರು, ತಂತ್ರಜ್ಞಾನ ಸಿಬ್ಬಂದಿಗಳನ್ನು ಕೆಎಂಸಿ ವತಿಯಿಂದ ಒದಗಿಸಿ ಸಂಪೂರ್ಣವಾಗಿ ಕಾರ್ಯಗತಗೊಳಿಸಲು ಸಿದ್ಧಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಶೀಘ್ರ ಸಾರ್ವಜನಿಕರ ಸೇವೆಗೆ ಕ್ಯಾಥ್‌ಲ್ಯಾಬ್ ದೊರಕಿಸಲು ಕ್ರಮ ಕೈಗೊಳ್ಳಲು ಅವರು ವೆನ್ಲಾಕ್ ಅಧೀಕ್ಷಕರಿಗೆ ಸೂಚಿಸಿದರು.

ವೆನ್ಲಾಕ್‌ನಲ್ಲಿ 35 ಹಾಸಿಗೆ ಸಾಮರ್ಥ್ಯದ ಹೊಸ ಡಯಾಲಿಸಿಸ್ ವಾರ್ಡ್‌ನ ಕಾಮಗಾರಿ ಪೂರ್ಣಗೊಂಡಿರುತ್ತದೆ. ಅಲ್ಲಿ ಅಗತ್ಯವಿರುವ ಸಣ್ಣಪುಟ್ಟ ಕೆಲಸಗಳನ್ನು ಪೂರ್ಣಗೊಳಿಸಬೇಕು. ವೆನ್ಲಾಕ್ ಕ್ರಿಟಿಕಲ್ ಕೇರ್ ಬ್ಲಾಕ್‌ನ ಕಾಮಗಾರಿ ಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಡಿಸಿ ಸೂಚಿಸಿದರು.

ವೆನ್ಲಾಕ್-ಮಿಲಾಗ್ರಿಸ್ ರಸ್ತೆಯ ಅಗಲೀಕರಣ ಕಾಮಗಾರಿ ಬಗ್ಗೆ ತ್ವರಿತವಾಗಿ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಿದ ಡಿಸಿ, ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯಕ್ಕೆ ಸಮರ್ಪಕವಾಗಿ ಹಾಜರಾಗುತ್ತಿರುವ ಬಗ್ಗೆ ಆಗಾಗ ಪರಿಶೀಲಿಸಲು ತಿಳಿಸಿದರು.

ಸಭೆಯಲ್ಲಿ ದ.ಕ.ಜಿಪಂ ಸಿಇಒ ನರ್ವಾಡೆ ನಾಯಕ್ ಕಾರ್ಬಾರಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಡಿಸಿಪಿ ರವಿಶಂಕರ್, ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಹಾಗೂ ಲೇಡಿಗೋಶನ್ ಅಧೀಕ್ಷಕ ಡಾ.ದುರ್ಗಾ ಪ್ರಸಾದ್, ಕೆಎಂಸಿ ಡೀನ್ ಉಣ್ಣಿಕೃಷ್ಣ್ಣನ್ ಮತ್ತಿತರರು ಉಪಸ್ಥಿತರಿದ್ದರು.

*ವೆನ್ಲಾಕ್ ಹೊಸ ಒಪಿಡಿ ಬ್ಲಾಕ್ ನಿರ್ಮಾಣ ಮಾಡಲು ಸರಕಾರದಿಂದ 70 ಕೋ.ರೂ. ಅನುದಾನ ಮಂಜೂರಾಗಿದೆ. ಈ ನಿಟ್ಟಿನಲ್ಲಿ ಒಪಿಡಿ ಬ್ಲಾಕ್‌ನಲ್ಲಿರುವ ಎಲ್ಲಾ ವಿಭಾಗಗಳನ್ನು ಟ್ರಾಮಾ ಬ್ಲಾಕ್‌ಗೆ ಸ್ಥಳಾಂತರಿಸಲು ಮತ್ತು ಈಗಿನ ಒಪಿಡಿ ಕಟ್ಟಡವನ್ನು ಸ್ಥಳಾಂತರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

*ವೆನ್ಲಾಕ್ ಆಸ್ಪತ್ರೆ ಅಧೀನದಲ್ಲಿರುವ ಅತ್ತಾವರ ಗ್ರಾಮದ 2.71 ಎಕರೆ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ಪಾವತಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಡಿಸಿ ಅನುಮತಿ ನೀಡಿದರು. ಆಸ್ಪತ್ರೆಯ ವಿವಿಧ ಭಾಗದ ಕಟ್ಟಡದಲ್ಲಿರುವ ರೋಗಿ ಗಳಿಗೆ ಆಹಾರ ಸರಬರಾಜು ಮಾಡಲು ಎಲೆಕ್ಟ್ರಿಕ್ ಬಗ್ಗಿ ವಾಹನ ಖರೀದಿಸಲು ನಿರ್ಣಯಿಸಲಾಯಿತು. ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಯ ವಿವಿಧ ಖರ್ಚು ವೆಚ್ಚಗಳಿಗೆ ಅನುಮೋದನೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X