ಮಟ್ಕಾ, ಲಾಟರಿ ಕಟ್ಟುನಿಟ್ಟಿನ ನಿಯಂತ್ರಣಕ್ಕೆ ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಲಾಟರಿ ಮತ್ತು ಮಟ್ಕಾಕ್ಕೆ ಸಂಪೂರ್ಣ ನಿಷೇಧವಿದೆ. ಈ ನಿಟ್ಟಿನಲ್ಲಿ ದ.ಕ. ಜಿಲ್ಲೆಯಲ್ಲಿ ಮಟ್ಕಾ ಹಾಗೂ ಲಾಟರಿ ಹಾವಳಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅನಧಿಕೃತ ಲಾಟರಿ ಹಾವಳಿಯ ನಿಯಂತ್ರಣದ ನಿಟ್ಟಿನಲ್ಲಿ ತರ‌್ರಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಣ್ಣ ಉಳಿತಾಯ ಇಲಾಖೆ ಸಹಾಯಕ ನಿರ್ದೇಶಕ ಪ್ರಸನ್ನ ಮಾತನಾಡಿ ಜಿಲ್ಲೆಯಲ್ಲಿ 2025ರ ಎಪ್ರಿಲ್‌ನಿಂದ ಜೂನ್‌ವರೆಗೆ 23 ಮಟ್ಕಾ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. 25 ಆರೋಪಿಗಳ ಮೇಲೆ ಪೊಲೀಸ್ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್.ಎನ್, ವಾಣಿಜ್ಯ ತೆರಿಗೆ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
Next Story





