ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಓರೆನ್ ದಿನಾಚರಣೆ

ಮಂಗಳೂರು, ಸೆ.16: ಅಂತರ್ರಾಷ್ಟ್ರೀಯ ಓರೆನ್ ದಿನಾಚರಣೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಹಿರಿಯ ಪರಿಸರ ಅಧಿಕಾರಿಡಾ ಲಕ್ಷ್ಮೀಕಾಂತ್ ಎಚ್ ಮಾತನಾಡಿ, ಓರೆನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಣೆ ಮಾಡುವ ಪದರವಾಗಿ ಕಾರ್ಯ ನಿರ್ವಹಿಸುತ್ತದೆ. ಸೂರ್ಯನ ನೇರಳಾತೀತ ಕಿರಣಗಳು ಭೂಮಿಗೆ ಬೀಳದಂತೆ ತಡೆದು ಮಣ್ಣು, ಸಸ್ಯಕಾಶಿ, ಜೀವರಾಶಿಗಳನ್ನು ಸಂರಕ್ಷಣೆ ಮಾಡುತ್ತದೆ ಎಂದರು.
ಮನುಕುಲವು ಪ್ರಕೃತಿಗೆ ಮಾಡುತ್ತಿರುವ ಹಾನಿಕಾರಕ ಚಟುವಟಿಕೆಗಳಿಂದ ಓರೆನ್ ಮಹಾಪದರ ನಾಶ ಆಗುತ್ತಿದೆ. ಮನುಷ್ಯ ಬಳಸುತ್ತಿರುವ ರೆಫ್ರಿಜರೇಟರ್, ಹವಾನಿಯಂತ್ರಕಗಳು ಸಾಕಷ್ಟು ಹಾನಿಕಾರಕ ಅನಿಲಗಳನ್ನು ಬಿಡುಗಡೆ ಮಾಡುವುದರಿಂದ ಕೆಟ್ಟ ಪರಿಣಾಮಗಳನ್ನು ಬೀರುತ್ತಿದೆ. ಮನುಷ್ಯ ಜೀವನ ಶೈಲಿಯನ್ನು ಬದಲಾವಣೆ ಮಾಡಿ ಕೊಂಡು ಪ್ರಕೃತಿಯನ್ನು ಬೆಳೆಸಿಕೊಂಡು ಓರೆನ್ ಪದರವನ್ನು ಮುಂದಿನ ಪೀಳಿಗೆಗೆ ಉಳಿಸಿ ಸಂರಕ್ಷಣೆ ಮಾಡುವಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.
ಬೋಂದೆಲ್ ಸರಕಾರಿ ಮಹಿಳಾ ಪಾಲಿಟೆಕ್ನಿಕ್ನ ವಿದ್ಯಾರ್ಥಿನಿಯರಿಗೆ ತಾರಾಲಯದಲ್ಲಿ ಪ್ರದರ್ಶನವನ್ನು ಏರ್ಪಡಿಸ ಲಾಯಿತು. ಇನ್ನೊವೇಶನ್ ಹಬ್ನ ಮೆಂಟರ್ ಆದರ್ಶ್ ಇನ್ನೊವೇಶನ್ ಹಬ್ನ ಇಲೆಕ್ಟ್ರಾನಿಕ್ಸ್, ಭೌತಶಾಸ್ತ್ರ, ರೋಬೋಟಿಕ್ಸ್ ಸಂಬಂಧಿಸಿದಂತೆ ಹಲವಾರು ಚಟುವಟಿಕೆಗಳ ಬಗ್ಗೆ ವಿವರಿಸಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರೊಜೆಕ್ಟ್ ಮಾಡಲು ಕೇಂದ್ರದಲ್ಲಿ ವ್ಯವಸ್ಥೆಗಳಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕಿಯರಾದ ವಂದನಾ ಗೌರಿ ಹಾಗೂ ಅಭಿಲಾಷ್ ಪಿ.ಕೆ ಉಪಸ್ಥಿತರಿದ್ದರು. ಕೇಂದ್ರದ ಕ್ಯುರೇಟರ್ ಜಗನ್ನಾಥ ನಿರೂಪಿಸಿ, ಶೈಕ್ಷಣಿಕ ಸಹಾಯಕಿ ರಶ್ಮಿ ಸ್ವಾಗತಿಸಿದರು. ಕಮ್ಯೂನಿಟಿ ಮೊಬಿಲೈಸರ್ ಶಿವರಾಮ್ ಎಂ. ವಂದಿಸಿದರು.







