ಜಾತಿ ಜನಗಣತಿ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ದೊರೆತಿಲ್ಲ: ಸತೀಶ್ ಕುಂಪಲ

ಮಂಗಳೂರು, ಸೆ.17: ಜಾತಿ ಜನಗಣತಿಯ ಬಗ್ಗೆ ಸಮರ್ಪಕವಾಗಿ ಜನಸಾಮಾನ್ಯರಿಗೆ ಮಾಹಿತಿ ನೀಡದೆ ಸಮೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ಮುಂಚಿತವಾಗಿ ಮಾಹಿತಿ ನೀಡಿ ಪೂರ್ವ ತಯಾರಿಯೊಂದಿಗೆ ಸಮೀಕ್ಷೆ ಆರಂಭಿಸುವುದು ಸೂಕ್ತ. ತರಾತುರಿಯಲ್ಲಿ ಸಮೀಕ್ಷೆ ನಡೆಸುವ ಬದಲು ಸಮೀಕ್ಷೆಯನ್ನು ಮುಂದೂಡುವುದು ಸೂಕ್ತ ಎಂದವರು ಅಭಿಪ್ರಾಯಿಸಿದರು.
ಸುದ್ದಿ ಗೋಷ್ಠಿ ಯಲ್ಲಿ ಉಪಸ್ಥಿತರಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಈ ಸಮೀಕ್ಷೆಯ ಬಗ್ಗೆ ಸಾಕಷ್ಟು ಗೊಂದಲವಿರುವಂತೆ ಕಾಣುತ್ತಿದೆ. ಇದರಲ್ಲಿ ಕಾಂಗ್ರೆಸ್ ನ ಹಿಡನ್ ಅಜೆಂಡಾ ಇದ್ದಂತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಪ್ರೇಮಾನಂದ ಶೆಟ್ಟಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪೂಜಾ ಪೈ, ಸಂಜಯ ಪ್ರಭು ಮೋಹನ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.
Next Story





