ಸಾಲಸೌಲಭ್ಯ ಯೋಜನೆ: ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನರು, ಬೌದ್ಧರು, ಸಿಖ್, ಪಾರ್ಸಿ ಸಮುದಾಯದ ಜನರಿಂದ 2025-26ನೇ ಸಾಲಿನಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ವಿದೇಶಿ ವಿದ್ಯಾಭ್ಯಾಸ ಸಾಲ, ಶ್ರಮಶಕ್ತಿ, ಸ್ವಾವಲಂಬಿ ಸಾರಥಿ, ವೃತ್ತಿ ಪ್ರೋತ್ಸಾಹ, ನೇರಸಾಲ, ಸಾಂತ್ವನ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು https://kmdconline.karnataka.gov.in ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿದಾರರು ತಹಶೀಲ್ದಾರ್‌ರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ 6 ಲಕ್ಷ ರೂ.ಮೀರಿರಬಾರದು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು ವಾಸದ ದೃಢೀಕರಣಕ್ಕಾಗಿ ಪಡಿತರ ಚೀಟಿಯನ್ನು ಅರ್ಜಿದಾರರು ಬ್ಯಾಂಕ್ ಖಾತೆ ಜೋಡಣೆಯಾಗಿರಬೇಕು. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಆಧಾರ್ ಹಾಗೂ ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ/ಪಿಎಸ್‌ಯು ಸರಕಾರದ ಉದ್ಯೋಗಿಯಾಗಿರಬಾರದು. ನಿಗಮದ ಇತರ ಯೋಜನೆಗಳಡಿ ಅರ್ಜಿದಾರರು ಅಥವಾ ಅವರ ಕುಟುಂಬದ ಸದಸ್ಯರು ನಿಗಮದಿಂದ ಈಗಾಗಲೇ ಸಾಲ ಸೌಲಭ್ಯ ಪಡೆದಿರಬಾರದು ಹಾಗೂ ವಿವಿಧ ಯೋಜನೆಗಳಿಗೆ ಅನುಗುಣವಾಗಿ ದಾಖಲಾತಿಗಳನ್ನು ಒದಗಿಸಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.





