ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ: ಕಾರ್ಯದರ್ಶಿಯಾಗಿ ಸತೀಶ್ ಪೆಂಗಲ್ ನೇಮಕ

ಮಂಗಳೂರು, ಸೆ.24: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಾಗಿ ಸತೀಶ್ ಪೆಂಗಲ್ ನೇಮಕಗೊಂಡಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯಾದರ್ಶಿಯಾಗಿರುವ ಸತೀಶ್ ಅವರು ಮಂಗಳೂರು ಉತ್ತರ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಸದಸ್ಯರಾಗಿ , ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಅನೇಕ ಸಾಮಾಜಿಕ ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿ ಕೊಂಡಿರುವ ಸತೇಶ್ ಪೆಂಗಲ್ ಇವರನ್ನು ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜ ಶಿಫಾರಸ್ಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಇಮ್ರಾನ್ ಪ್ರತಾಪಗರ್ಹಿ ಎಂ.ಪಿ. ನಿರ್ದೇಶನ ದಂತೆ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿಯಯನ್ನಾಗಿ ನೇಮಕ ಮಾಡಿರುವುದಾಗಿ ಪ್ರಕಟನೆ ತಿಳಿಸಿದೆ.





