Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ...

ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ ಸದನ ಸಮಿತಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 Sept 2025 10:05 PM IST
share
ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ ಸದನ ಸಮಿತಿ ಸೂಚನೆ

ಮಂಗಳೂರು, ಸೆ.24: ಮಹಾನಗರಪಾಲಿಕೆಯ ಸುರತ್ಕಲ್ ವಲಯ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ (ಯುಜಿಡಿ)ಗಳನ್ನು ತ್ವರಿತವಾಗಿ ಅನುಷ್ಠಾನ ಗೊಳಿಸಬೇಕು ಎಂದು ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ದ.ಕ. ಜಿಲ್ಲಾಡಳಿತಕ್ಕೆ ಸೂಚಿಸಿದೆ.

ಸಮಿತಿಯ ಅಧ್ಯಕ್ಷ ಶರವಣ ಟಿ.ಎ. ನೇತೃತ್ವದ ಸಮಿತಿಯು ಬುಧವಾರ ದ.ಕ.ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದರು.

ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಯುಜಿಡಿ ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ ಯೋಜನೆ ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಮಿತಿಯು ಇದಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿ ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಹಾಗೂ ಯೋಜನೆಯ ಯಶಸ್ವಿಗೆ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಮತ್ತು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಸೂಚಿಸಿತು.

ಕೆಯುಐಡಿಎಫ್‌ಸಿ ಅಧಿಕಾರಿಗಳು ಸಮಿತಿ ಮುಂದೆ ಯೋಜನೆ ವಿಳಂಬದ ಕಾರಣ ವಿವರಿಸಿದರಲ್ಲದೆ ಒಳಚರಂಡಿ ಮನೆ ಮನೆ ಸಂಪರ್ಕಕ್ಕೆ ಹೆಚ್ಚುವರಿ 22 ಕೋ.ರೂ.ಅನುದಾನ ನೀಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಸುರತ್ಕಲ್ ವಲಯದಲ್ಲಿ ಒಳಚರಂಡಿ ಕಾಮಗಾರಿಯಲ್ಲಿ 116 ಕಿ.ಮೀ. ಪೈಪ್‌ಲೈನ್ ಹಾಗೂ 824 ಮ್ಯಾನ್‌ ಹೋಲ್‌ಗಳನ್ನು ಮಾಡಲಾಗಿದೆ. ಇಲ್ಲಿನ ಬಹುತೇಕ ಪ್ರದೇಶಗಳಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ವಿವರಿಸಿದರು.

ಈ ಎರಡೂ ಒಳಚರಂಡಿ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗಮನಹರಿಸಿ ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ಸಮಿತಿಯ ಅಧ್ಯಕ್ಷ ಶರವಣ ಜಿಲ್ಲಾಧಿಕಾರಿಗೆ ಸೂಚಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯು ಮಹಾನಗರಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ದಿಂದ ಕಾರ್ಯನಿರ್ವಹಿಸಬೇಕು. ಕೆರೆಗಳ ಸಂರಕ್ಷಣೆ, ನೀರು ಮಾಲಿನ್ಯದಂತಹ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸಬೇಕು. ನ್ಯಾಯಾಲಯದಲ್ಲಿರುವ ಪ್ರಕರಣಗಳಲ್ಲಿ ಸಮರ್ಥವಾಗಿ ದಾಖಲೆಗಳನ್ನು ಮಂಡಿಸಬೇಕು ಎಂದು ಸೂಚಿಸಿದ ಶರವಣ ಮಾಲಿನ್ಯ ಮಂಡಳಿಗೆ ಪ್ರತ್ಯೇಕ ಕಾನೂನು ಕೋಶ ಒದಗಿಸಲು ಸರಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.

ದ.ಕ. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದ 3 ಪ್ರಕರಣ ಹಾಗೂ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ 1 ಪ್ರಕರಣವು ರಾಷ್ಟ್ರೀಯ ಹಸಿರು ಪೀಠ (ಎನ್‌ಜಿಟಿ)ದ ಮುಂದಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸಮಿತಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸದಸ್ಯರಾದ ಮಂಜುನಾಥ ಭಂಢಾರಿ, ಪ್ರತಾಪ ಸಿಂಹ ನಾಯಕ್, ಡಿಎಸ್ ಅರುಣ್, ಕೆ.ಎಸ್. ನವೀನ್, ತಿಪ್ಪಣ್ಣಪ್ಪಕಮಕನೂರ, ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಉಪಸ್ಥಿತರಿದ್ದರು.

ಸಭೆಗೂ ಮುನ್ನ ಸಮಿತಿಯ ನಿಯೋಗವು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ ಸರಕಾರಿ ಭರವಸೆ ಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಅನುಷ್ಠಾನ ಕುರಿತು ಚರ್ಚೆ ನಡೆಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X