Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸ್ಪೀಕರ್...

ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Sept 2025 10:24 PM IST
share
ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
ಡಾ.ಮೋಹನ್ ಆಳ್ವರಿಗೆ ಮಂಗಳೂರು ದಸರಾ ಸನ್ಮಾನ

ಮಂಗಳೂರು, ಸೆ.25; ಕುದ್ರೋಳಿ ಶ್ರೀ ಗೋಜರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಗುರುವಾರ ಮಂಗಳೂರು ದಸರಾ ಸಮಾರಂಭದ ಅಧ್ಯಕ್ಷತೆವಹಿಸಿ ಮಂಗಳೂರು ದಸರಾ ಸನ್ಮಾನ 2025 ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರು ದೇಶದ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ತಾನು ಬರಿಗೈಯಲ್ಲಿದ್ದಾಗ ತನ್ನನ್ನು ಕರೆದು ಚುನಾವಣೆಗೆ ನಿಲ್ಲಿಸಿ, ನಾನು ಕೇಂದ್ರ ಸಚಿವನಾಗಲು ಕಾರಣರಾದರು. ಕುದ್ರೋಳಿಯ ನವೀಕರಣದ ಬಳಿಕ ದಿವಂಗತ ಇಂದಿರಾ ಗಾಂಧಿ ಈ ದೇವಸ್ಥಾನ ವನ್ನು ಉದ್ಘಾಟಿಸಿದವರು, ರಾಜೀವ ಗಾಂಧಿ, ಸೋನಿಯಾ ಗಾಂಧಿಯವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಅವರ ಹೆಸರನ್ನು ಯಾವತ್ತು ಮರೆಯಬಾರದು ಎಂದು ಆಡಳಿತ ಸಮಿತಿಯವರಿಗೆ ಎಚ್ಚರಿಕೆ ನೀಡಿ ಶುಭ ಹಾರೈಸಿದರು.

ಕರ್ನಾಟಕ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಮಂಗಳೂರು ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಜಿಲ್ಲೆಯ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಕುದ್ರೋಳಿಯಲ್ಲಿ ನಡೆಯುತ್ತಿರುವ ಮಂಗಳೂರು ದಸರಾದಲ್ಲಿ ಕಾಣಲು ಸಾಧ್ಯ. ನಾನು ಬಾಲ್ಯದಿಂದಲೂ ರಾಜಕೀಯ ಗುರುಗಳಾದ ಮಾಜಿ ವಿತ್ತ ಸಚಿವ ಬಿ ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದಸರಾ ದೇವಸ್ಥಾನದ ಕೆಲಸ ಗಮನಿಸಿದ್ದೇನೆ. ಕುದ್ರೋಳಿ ಶ್ರೀ ಕ್ಷೇತ್ರ ಸೌಹಾರ್ದ ಪರಂಪರೆಯ ಸಂದೇಶವನ್ನು ದೇಶಕ್ಕೆ ಸಾರುವ ಕೇಂದ್ರ. ಎಲ್ಲಾ ಜಾತಿ,ಧರ್ಮ ನಮ್ಮನ್ನು ಒಂದು ಗೂಡಿಸಬೇಕು ನಮ್ಮನ್ನು ವಿಂಗಡಿಸುವಂತಾಗಬಾರದು.ಬ್ರಹ್ಮಶ್ರೀ ನಾರಾಯಣ ಗುರುಗಳು ನಮಗೆ ನೀಡಿದ ಸಂದೇಶವೂ ಅದೇ ಆಗಿದೆ. ನಾವೆಲ್ಲರೂ ಭಾರತೀಯರು ನಾವೆಲ್ಲ ಒಂದು ಎಂದುಅರಿತುಕೊಂಡಾಗ ಸಮಾಜದ ಸಾಮೂಹಿಕ ಅಭಿವೃದ್ಧಿ ಸಾಧ್ಯ ಎಂದರು.

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಅಚಿವ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡುತ್ತಾ, ಮೈಸೂರು ದಸರಾದ ಬಳಿಕ ರಾಜ್ಯದಲ್ಲಿ ಮಂಗಳೂರು ದಸರಾ ಪ್ರತಿವರ್ಷ ಜನಾಕರ್ಷಣೆ ಪಡೆಯುತ್ತಿದೆ.ಜನಾರ್ದನ ಪೂಜಾರಿಯವರು ನೇತೃತ್ವದಲ್ಲಿ ಅವರ ಕಳಕಳಿಯಿಂದ ದಸರಾ ನಾಡಹಬ್ಬವಾಗಿ ಎಲ್ಲಾಜನ ಪಾಲ್ ಗೊಳ್ಳುತ್ತಿರುವುದು ನಮ್ಮ ಪರಂಪರೆ ಯಾಗಿದೆ.ಧಾರ್ಮಿಕ ಚಟುವಟಿಕೆಗಳು ನಮ್ಮ ಬದುಕಿನ ಅಂಗವಾಗಿ ಇದೆ.ಇದರೊಂದಿಗೆ ನಾವು ಪರಸ್ಪರ ಪ್ರೀತಿ ವಿಶ್ವಾಸದೊಂದಿಗೆ ಸಾಗಬೇಕಾಗಿದೆ.ಮುಂದಿನ ವರ್ಷ ದಿಂದ ಮಂಗಳೂರು ದಸರಾ ಉತ್ಸವಕ್ಕೂ ಸರಕಾರದ ಅನುದಾನ ನೀಡುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಸಂಸದ ಬ್ರಿಜೇಶ್ ಚೌಟ,ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ,ಐವನ್ ಡಿ ಸೋಜ,ಮುಖ್ಯ ಸಚೇತಕ ಅಶೋಕ್ ದೇವಪ್ಪ ಪಟ್ಟಣ್,ಗಡಿನಾಡ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ, ಮಾಜಿ ಸಚಿವ ರಮಾನಾಥ ರೈ,ಮಾಜಿ ಶಾಸಕ ಜೆ‌.ಆರ್.ಲೋಬೊ,ಹರೀಶ್ ಕುಮಾರ್ , ಕುದ್ರೋಳಿ ಕೇತ್ರಾಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ,ಸದಸ್ಯ ಹೆಚ್.ಎಸ್.ಸಾಯಿರಾಂ, ಕ್ಷೇತ್ರಾಭಿವೃದ್ಧಿ ಸಮಿತಿಯ ಚೇರ್ ಮನ್ ದೇವೇಂದ್ರ ಪೂಜಾರಿ,ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ ,ಟ್ರಸ್ಟಿಕೃತೀನ್ ಅಮೀನ್, ಸಮಿತಿಯ ಸದಸ್ಯ ಹರಿಕೃಷ್ಣ ಬಂಟ್ವಾಳ್, ಲೀಲಾಕ್ಷ ಕರ್ಕೆರಾ,ಸಂತೋಷ್ ಪೂಜಾರಿ ದೇವಳದ ಆಡಳಿತ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ಆಡಳಿತ ಸಮಿತಿಯ ಕೋಶಾಧಿಕಾರಿ ಆರ್.ಪದ್ಮರಾಜ್ ಸ್ವಾಗತಿಸಿದರು.ಸ್ಮಿತೇಶ್ ಎಸ್ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಗಳ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ತುಕಾರಾಮ ಪೂಜಾರಿ, ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ .ದುರ್ಗಾ ಪ್ರಸಾದ್ ಎಂ.ಆರ್ ರವರನ್ನು ಮಂಗಳೂರು ದಸರಾ ಸನ್ಮಾನದ ವೇದಿಕೆಯಲ್ಲಿ ಅಸಮಾನ್ಯಸ್ತ್ರೀ ಗೌರವವನ್ನು ಶಾಲೆಟ್ ಅವರನ್ನು( ಮೂಕ ಪ್ರಾಣಿಗಳ ಸಾಕು ತಾಯಿ ) ಸನ್ಮಾನಿಸಲಾಯಿತು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X