ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು, ಸೆ.29: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ, ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಂದರ್ಭ ನೀಡಿ ಗೌರಸುವ ಪದ್ಧತಿ ದ.ಕ.ಜಿಲ್ಲಾಡಳಿತ ನಡೆಸಿಕೊಂಡು ಬಂದಿದೆ. ಅದರಂತೆ ಪ್ರಸಕ್ತ (2025-26)ನೇ ಸಾಲಿನಲ್ಲಿ ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ ನೀಡುವ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆ, ಸಮಾಜ ಸೇವೆ, ಜಾನಪದ, ಪರಿಸರ-ವಿಜ್ಞಾನ, ವೈದ್ಯಕೀಯ, ಸಂಶೋಧನೆ, ಪತ್ರಿಕೋದ್ಯಮ ಇತ್ಯಾದಿ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ/ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರಣೆಗಳೊಂದಿಗೆ ಅ.20ರಂದು ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಲು ಪ್ರಕಟನೆ ತಿಳಿಸಿದೆ.
Next Story





