Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹುಲಿವೇಷ ಸರದಾರ ಬಜಿಲಕೇರಿ ಕಮಲಾಕ್ಷರಿಗೆ...

ಹುಲಿವೇಷ ಸರದಾರ ಬಜಿಲಕೇರಿ ಕಮಲಾಕ್ಷರಿಗೆ ತುಳು ಅಕಾಡೆಮಿ ಚಾವಡಿ ತಮ್ಮನ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ29 Sept 2025 10:54 PM IST
share
ಹುಲಿವೇಷ ಸರದಾರ ಬಜಿಲಕೇರಿ ಕಮಲಾಕ್ಷರಿಗೆ ತುಳು ಅಕಾಡೆಮಿ ಚಾವಡಿ ತಮ್ಮನ ಪ್ರದಾನ

ಮಂಗಳೂರು, ಸೆ.29: ತುಳುನಾಡಿನ ಹಿರಿಯ ಹುಲಿ ವೇಷ ಕಲಾವಿದ ಹಾಗೂ ಸಂಘಟಕ ಬಜಲಕೇರಿ ಕಮಲಾಕ್ಷ ಅವರಿಗೆ ಸೋಮವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ‘ಚಾವಡಿ ತಮ್ಮನ ಪ್ರದಾನ ಮಾಡಿ ಗೌರವಿಸಲಾಯಿತು.

ಮಂಗಳೂರು ನಗರದ ಮಣ್ಣಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಎಚ್.ಎಂ.ಎಸ್. ಮುಖಂಡ ಹಾಗೂ ಮಣ್ಣಗುಡ್ಡ ಸರಕಾರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಚಂದ್ರ ಶೆಟ್ಟಿ ಅವರು ಸನ್ಮಾನ ನೆರವೇರಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಬಜಿಲಕೇರಿ ಕಮಲಾಕ್ಷ ಅವರು ‘‘ತಾನು ತಂದೆಯ ಕಾಲದಿಂದ ಹುಲಿವೇಷವನ್ನು ಸಾಂಪ್ರದಾಯಿಕವಾಗಿ ಹಾಗೂ ನಿಷ್ಠೆಯಿಂದ ಮಾಡಿಕೊಂಡು ಬಂದಿರುವುದಾಗಿ ತಿಳಿಸಿದರು. ಹಿಂದಿನ ಕಾಲದಲ್ಲಿ ಕಡಿಮೆ ವೆಚ್ಚದಲ್ಲಿ ವೇಷ ನಡೆಯುತ್ತಿತ್ತು, ಈಗ ತುಂಬಾ ದುಬಾರಿಯಾಗಿದೆ ಎಂದರು.

ಹಿಂದೆ ಊದು ಪೂಜೆ ಎಂಬ ಸಂಪ್ರದಾಯ ಇರಲಿಲ್ಲ, ಈಗ ಕೆಲವೆಲ್ಲ ವಿಚಾರಗಳು ಬದಲಾಗಿದೆ, ಹುಲಿ ವೇಷಧಾರಿ ಗಳ ಮೈ ಮೇಲೆ ದೈವ ಅಥವಾ ಬೇರೆ ಯಾವುದೇ ಶಕ್ತಿಗಳು ಬರುವುದು ಸಾಧ್ಯವೇ ಇಲ್ಲ ಎಂದು ಕಮಲಾಕ್ಷ ಅವರು ಹೇಳಿದರು.

ತುಳು ಅಕಾಡೆಮಿಯ ಚಾವಡಿ ತಮ್ಮನದ ಗೌರವ ಅತೀವ ಖುಷಿ ಕೊಟ್ಟಿದೆ ಎಂದು ಕಮಲಾಕ್ಷ ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು ನಾಡಿನ ಜಾನಪದ ಲೋಕದಲ್ಲಿ ಹುಲಿ ವೇಷ ಕುಣಿತ ಮಹತ್ವವಾದದ್ದು, ಹುಲಿ ಕುಣಿತಕ್ಕೆ ಬಜಿಲಕೇರಿ ಕಮಲಾಕ್ಷ ಅವರು ನೀಡಿರುವ ಸೇವೆಗೆ ಅವರ ಊರಿನ ಜನರ ಸಮ್ಮುಖದಲ್ಲಿ ಚಾವಡಿ ತಮ್ಮನದ ಮೂಲಕ ಸನ್ಮಾನಿಸಿರುವುದು ಹುಲಿವೇಷ ಕಲೆಯ ಬಗ್ಗೆ ಹಾಗೂ ಕಲಾವಿದರ ಬಗೆಗಿನ ಗೌರವದ ದ್ಯೋತಕವಾಗಿದೆ ಎಂದರು.

ಅಭಿನಂದನಾ ಭಾಷಣ ಮಾಡಿದ ಸಾಮಾಜಿಕ ಕಾರ್ಯಕರ್ತ ಎಂ.ಜಿ. ಹೆಗ್ಡೆ ಅವರು ತುಳುನಾಡಿನಂತಹ ಶ್ರೀಮಂತ ಬಹು ಸಂಸ್ಕೃತಿ ದೇಶದ ಬೇರೆಲ್ಲೂ ಇಲ್ಲ. ಹುಲಿ ಕುಣಿತವು ರಾಷ್ಟ್ರ-ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆಯು ವಲ್ಲಿ ಕಮಲಾಕ್ಷರ ಕೊಡುಗೆ ದೊಡ್ಡದು. ಕಬಡ್ಡಿ ಕ್ರೀಡೆ ಸಂಘಟಿಸುವಲ್ಲೂ ಕಮಲಾಕ್ಷರು ಬಹುವಾಗಿ ಶ್ರಮಿಸಿದವರು ಎಂದು ಬಣ್ಣಿಸಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ .ಗಟ್ಟಿ, ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಶೆಟ್ಟಿ ಶುಭ ಹಾರೈಸಿದರು.

ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ ಬರ್ಕೆ ಉಪಸ್ಥಿತರಿದ್ದರು.

ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿ,ಸನ್ಮಾನ ಪತ್ರ ವಾಚಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಕಾರ್ಯಕ್ರಮ ನಿರೂಪಿಸಿದರು, ರಾಜೇಶ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X