ಬನ್ನಡ್ಕದಲ್ಲಿ ಶಾರದೋತ್ಸವ: ಡಾ.ಎಂ. ಮೋಹನ ಆಳ್ವರಿಗೆ 'ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ' ಪ್ರದಾನ

ಮೂಡುಬಿದಿರೆ: ಸಾರ್ವಜನಿಕ ಶ್ರೀ ಶಾರದೋತ್ಸವ ಟ್ರಸ್ಟ್ ಬನ್ನಡ್ಕದ ಆಶ್ರಯದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕದ ಕಲಾಮಂದಿರದಲ್ಲಿ ನಡೆದ 4ನೇ ವರ್ಷದ ಶಾರದೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರಿಗೆ ಗುರುವಾರ 'ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ-2025'ನ್ನು ಪ್ರದಾನಿಸಲಾಯಿತು.
ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಮಿತಿಯ ಅಧ್ಯಕ್ಷ ಎಂ. ದಯಾನಂದ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಡಾ. ಎಂ. ಮೋಹನ ಆಳ್ವ ಅವರಿಗೆ 'ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ-2025'ನ್ನು ಅತಿಥಿಗಳು ಪ್ರದಾನಿಸಿದರು. ಇದೇ ವೇಳೆ ಶಾರದೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಎಂ. ಸುದರ್ಶನ್, ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ, ಮೂಡುಬಿದಿರೆ ಎಸ್‌ಕೆಎಫ್ ಎಲಿಕ್ಸರ್ ಸಂಸ್ಥೆಯ ಪ್ರಜ್ವಲ್ ಆಚಾರ್ಯ, ಮೂಡುಬಿದಿರೆ ಗಣೇಶೋತ್ಸವ ಟ್ರಸ್ಟ್ ಅಧ್ಯಕ್ಷ ನಾರಾಯಣ ಪಿ.ಎಂ, ನ್ಯೂ ವೈಬ್ರೆಂಟ್ ಕಾಲೇಜಿನ ಟ್ರಸ್ಟಿ ಶರತ್ ಗೋರೆ, ಉದ್ಯಮಿ ಕೆ. ಶ್ರೀಪತಿ ಭಟ್, ಕೆ. ಅಮರನಾಥ ಶೆಟ್ಟಿ ಟ್ರಸ್ಟ್‌ನ ಟ್ರಸ್ಟಿ ಅಮರಶ್ರೀ ಶೆಟ್ಟಿ, ಉದ್ಯಮಿ ಬೋಳ ವಿಶ್ವನಾಥ್ ಕಾಮತ್, ಮೂಳೆ ಚಿಕಿತ್ಸಾ ತಜ್ಞ ಡಾ. ಉಜ್ವಲ್ ಯು. ಸುವರ್ಣ, ನರಸಿಂಹ ಕಾಮತ್ ಸಾಣೂರು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಯೋಗಿ ಸುಧಾಕರ್ ತಂತ್ರಿ, ಶ್ರೀ ಕ್ಷೇತ್ರ ಬನ್ನಡ್ಕದ ಆಡಳಿತ ಮೊಕ್ತೇಸರ ಸುಕುಮಾರ್ ಬಲ್ಲಾಳ್, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ವಿದ್ಯಾಥಿ೯ಗಳಿಗೆ ಧನ ಸಹಾಯ ನೀಡಿರುವ ಡಾ.ಮಧ್ವರಾಜ್ ಶೆಟ್ಟಿ ಅಂಬೂರಿ, ಆಳ್ವಾಸ್ ನ ಟ್ರಸ್ಟಿ ವಿವೇಕ್ ಆಳ್ವ, ಅಶ್ವತ್ಥ್ ಪಣಪಿಲ ಮೊದಲಾದವರು ಉಪಸ್ಥಿತಿದ್ದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್ ಸ್ವಾಗತಿಸಿದರು. ಕೋಶಾಧಿಕಾರಿ ಸಂತೋಷ್ ನಾಯ್ಕ್ ಬನ್ನಡ್ಕ ಬಹುಮಾನಿತರ ವಿವರ ನೀಡಿದರು. ವೇಣುಗೋಪಾಲ್ ಶೆಟ್ಟಿ ಮತ್ತು ಸತೀಶ್ ಹೊಸ್ಮಾರು ಕಾರ್ಯಕ್ರಮ ನಿರೂಪಿಸಿದರು.







