Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಾಂಧಿಯನ್ನು ಓದಿ ತಿಳಿದವರು ಅಪಪ್ರಚಾರ...

ಗಾಂಧಿಯನ್ನು ಓದಿ ತಿಳಿದವರು ಅಪಪ್ರಚಾರ ಮಾಡಲಾರರು: ಅರವಿಂದ ಚೊಕ್ಕಾಡಿ

ವಾರ್ತಾಭಾರತಿವಾರ್ತಾಭಾರತಿ4 Oct 2025 7:36 PM IST
share
ಗಾಂಧಿಯನ್ನು ಓದಿ ತಿಳಿದವರು ಅಪಪ್ರಚಾರ ಮಾಡಲಾರರು: ಅರವಿಂದ ಚೊಕ್ಕಾಡಿ

ಮಂಗಳೂರು, ಅ.4: ಸ್ವಾತಂತ್ರ್ಯ ನಂತರದ ಭಾರತದಲ್ಲಿ ವೈಚಾರಿಕ ಪ್ರಜ್ಞೆಯನ್ನು ಅಭಿವೃದ್ಧಿ ಪಡಿಸುವ ಕಾರ್ಯ ನಡೆದಿಲ್ಲ. ಹಾಗಾಗಿಯೇ ಗಾಂಧಿಯನ್ನು ಕೆಲವರು ದೇವರನ್ನಾಗಿಸದರೆ, ಮತ್ತ ಕೆಲವರು ಶತ್ರುವಾಗಿ ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಗಾಂಧಿಯನ್ನು ಅರಿತವರು ಅಪಪ್ರಚಾರ ಮಾಡಲಾರರು ಎಂದು ಗಾಂಧಿ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಅರವಿಂದ ಚೊಕ್ಕಾಡಿ ಅಭಿಪ್ರಾಯಿಸಿದ್ದಾರೆ.

ತುಳುಭವನದಲ್ಲಿ ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ನಡೆದ ತುಳುವ ನೆಲದಲ್ಲಿ ಲೋಕಮಾನ್ಯರು ವಿಚಾರಗೋಷ್ಟಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜತೆಗಿನ ಸಂವಾದದ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಗಾಂಧೀಜಿ ಕೂಡಾ ನಮ್ಮಂತೆ ಸಾಮಾನ್ಯರು. ಗಾಂಧಿ ಹತ್ಯೆ ಬಳಿಕ ಗೋಡ್ಸೆ ಕೋರ್ಟ್‌ಗೆ ಸಲ್ಲಿಸಿದ್ದ ಮೂರೂವರೆ ಪುಟಗಳ ಹೇಳಿಕೆ ನೀಡಿದ್ದ. ಅದನ್ನು ಗೋಡ್ಸೆ ಸಹೋದರ 150 ಪುಟಗಳ ಪುಸ್ತಕದಲ್ಲಿ ಗಾಂಧಿಯನ್ನು ಅರಿಯದೆ ತನ್ನ ಮಾತುಗಳಲ್ಲಿ ಬಣ್ಣಿಸಿದ್ದ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀಜಿ ಬಗ್ಗೆ ಅಪಪ್ರಚಾರಕ್ಕೆ ಕಾರಣವಾಗಿದೆ. ಒಂದು ವಿಷಯವನ್ನು ಹಲವು ರೀತಿಯಲ್ಲಿ ನೋಡಬಹುದು ಎಂಬುದಕ್ಕೆ ಇದೊಂದು ಉದಾಹರಣೆ. ಆದರೆ ಸತ್ಯದ ಅನುಸಂಧಾನ ನಡೆದಾಗ ವಾಸ್ತವದ ಅರಿವಾಗುತ್ತದೆ. ಗಾಂಧೀಜಿ ಪರಿಪೂರ್ಣರು ಎಂಬುದನ್ನು ಒಪ್ಪಲಾಗದು. ಆದರೆ ಹಿಂಸೆ ಮತ್ತು ಅಹಿಂಸೆಯ ನಡುವೆ ಹೇಗೆ ಬದುಕಬೇಕು ಎಂಬುದನ್ನು ಗಾಂಧೀಜಿ ನಮಗೆ ತೋರಿಸಿಕೊಟ್ಟಿದ್ದಾರೆ ಎಂದವರು ವಿದ್ಯಾರ್ಥಿಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಹಲವು ಮಂದಿ ಪಾಲು ಪಡೆದಿದ್ದರೂ ಗಾಂಧೀಜಿಯನ್ನು ರಾಷ್ಟ್ರ ಪಿತ ಎಂದು ಯಾಕೆ ಕರೆಯಲಾಗುತ್ತದೆ ಎಂಬ ವಿದ್ಯಾರ್ಥಿನಿಯ ಪ್ರಶ್ನೆಗೆ, ರಾಷ್ಟ್ರ ನಿರ್ಮಾಣ ಮಾಡಿದವರನ್ನು ರಾಷ್ಟ್ರಪಿತ ಎಂದು ಕರೆ ಯುವ ಪರಿಪಾಠ ರೋಮನ್‌ನದ್ದು. ರಾಷ್ಟ್ರಪಿತ ಎಂದು ಸಂಬೋಧಿಸಲು ಒಂದಾ ಜನರಿಂದ ಕರೆಯಲ್ಪಡಬೇಕು ಅಥವಾ ಸಂಸತ್ತಿನಲ್ಲಿ ಅದು ಘೋಷಣೆಯಾಗಬೇಕು. ಆದರೆ ಗಾಂಧೀಜಿ ರಾಷ್ಟ್ರಪಿತವೆಂದು ಸಂಸತ್ತಿನಲ್ಲಿ ಘೋಷಣೆ ಯಾಗಿಲ್ಲ. ಬದಲಾಗಿ ಸುಭಾಷ್ ಚಂದ್ರ ಬೋಸ್ ಅವರು ಗಾಂಧೀಜಿಯನ್ನು ಆ ಹೆಸರಿನಲ್ಲಿ ಸಂಬೋಧಿಸಿದರು. ಹಾಗಾಗಿ ಅವರನ್ನು ರಾಷ್ಟ್ರಪಿತ ಎಂದು ಹೇಳಬೇಕಾದವರು ಹೇಳಬಹುದು. ಇದಕ್ಕೆ ಯಾವುದೇ ನಿಯಮ ಇಲ್ಲ. ದೇಶದಲ್ಲಿ ಆ ಸಂದರ್ಭದಲ್ಲಿದ್ದ ವ್ಯವಸ್ಥೆಯನ್ನು ಒಗ್ಗೂಡಿಸಿ ಹೋಳುಗಳಾಗಿ ಹಂಚಿ ಹೋಗಿದ್ದ ಭಾರತದಲ್ಲಿ ರಾಷ್ಟ್ರೀಯ ಪ್ರಜ್ಞೆ ಬಿತ್ತಿದವರು ಗಾಂಧೀಜಿ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು ಎಂದು ಅರವಿಂದ ಚೊಕ್ಕಾಡಿ ಹೇಳಿದರು.

ಗಾಂಧೀಜಿಯ ಬಗ್ಗೆ ಪಠ್ಯವಿದೆಯಾದರೂ ದೇಶ ವಿಭಜನೆಯ ಕುರಿತಂತೆ ಮಾಹಿತಿ ಇಲ್ಲ. ಹಾಗಾಗಿಯೇ ಹಲವು ತಪ್ಪು ಕಲ್ಪನೆಗಳಿಗೆ ಕಾರಣವಾಗಿದೆ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ, ಪ್ರತಿಕ್ರಿಯಿಸಿದ ಅರವಿಂದ ಚೊಕ್ಕಾಡಿ, ಆ ಕಾರ್ಯ ಆಗಬೇಕಾಗಿದೆ. ದೇಶ ವಿಭಜನೆಗೆ ಗಾಂಧೀಜಿಯಾಗಲಿ ಅಥವಾ ಇತರ ಸ್ವಾತಂತ್ರ್ಯ ಹೋರಾಟಗಾರರಾಗಲಿ ಕಾರಣವಲ್ಲ. ಬದಲಾಗಿ ಅದು ಬ್ರಿಟಿಷರ ಪಿತೂರಿ ಎಂಬುದನ್ನು ತಿಳಿದವರು ಯುವಜನಾಂಗಕ್ಕೆ ತಿಳಿಸುವ ಕಾರ್ಯ ಆಗಬೇಕು. ಈ ಬಗ್ಗೆ ಪಠ್ಯ ಪುಸ್ತಕದಲ್ಲಿ ಅಳವಡಿಸಲು ತಾನು ಕೂಡಾ ಶಿಫಾರಸು ಮಾಡುವುದಾಗಿ ಹೇಳಿದರು.

ವಿಚಾರಗೋಷ್ಟಿ ಮತ್ತು ಸಂವಾದ ಕಾರ್ಯಕ್ರಮವನ್ನು ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಎಂ. ಸುಂದರ ಬೆಳುವಾಯಿ ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಆರಂದಲ್ಲಿ ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಕುದ್ಮುಲ್ ರಂಗರಾವ್ ಅವರ ಆದರ್ಶ ಮತ್ತು ಕೊಡುಗೆಗಳ ಬಗ್ಗೆ ಮಾತನಾಡಿದರು. ‘ಸ್ವಾತಂತ್ರ್ಯ ಹೋರಾಟ ದಲ್ಲಿ ಗಾಂಧಿ ಮತ್ತು ವರ್ತಮಾನದಲ್ಲಿ ಗಾಂಧಿ ಬಗ್ಗೆ ಅರವಿಂದ ಚೊಕ್ಕಾಡಿ ಮಾತನಾಡಿದರು. ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X