Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಡುಬಿದ್ರೆ: ಸಿರಿಮುಡಿ ಕ್ರೆಡಿಟ್...

ಪಡುಬಿದ್ರೆ: ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ5 Oct 2025 7:33 PM IST
share
ಪಡುಬಿದ್ರೆ: ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಉದ್ಘಾಟನೆ

ಪಡುಬಿದ್ರೆ: ಭಂಟರ ಸಂಘ ಪಡುಬಿದ್ರೆ, ಬಂಟ್ಸ್ ವೆಲ್ಪೇರ್ ಟ್ರಸ್ಟ್ ಪಡುಬಿದ್ರೆ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರೆ ಸಹಭಾಗಿತ್ವದಲ್ಲಿ ಸದಾನಂದ ಕುಡ್ಡು ಶೆಟ್ಟಿ ಹವಾನಿಯಂತ್ರಿತ ಸ್ವಂತ ಕಟ್ಟಡದಲ್ಲಿ ಸ್ಥಾಪಿಸಿರುವ ಸಿರಿಮುಡಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ನಿ) ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ರವಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ದೇಶದ ವಾಣಿಜ್ಯ ಬ್ಯಾಂಕ್‍ಗಳ ತವರೂರಾಗಿದ್ದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಸಹಕಾರ ಸಂಘ, ಬ್ಯಾಂಕ್‍ಗಳು ಜನರ ಅಭಿವೃದ್ಧಿಗೆ ಇರುವ ಏಕೈಕ ಸಂಸ್ಥೆಗಳು ಸಹಕಾರಿ ಸಂಸ್ಥೆಗಳಾಗಿವೆ ಎಂದರು.

ಸಿರಿಮುಡಿ ದತ್ತಿನಿ ಕಾರ್ಯಕ್ರಮವನ್ನು ಉದ್ಘಾಟಿಸಿ ಪಡುಬಿದ್ರಿ ಬಂಟರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದ ಎಮ್.ಆರ್.ಜಿ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ ಬಂಟರ ಸಂಘದ ದಿಗ್ಗಜರೆಲ್ಲ ಇಲ್ಲಿದ್ದೀರಿ ಅವರೆನ್ನೆಲ್ಲಾ ಸಂಪರ್ಕಿಸಿ ಮುಂದಿನ 3 ವರ್ಷದಲ್ಲಿ ಬ್ಯಾಂಕ್‍ನ ಠೇವಣಾತಿಯನ್ನು 131 ಕೋಟಿಗೆ ಏರಿಸುವ ಪ್ರಯತ್ನ ಸಂಘದ ಅಧ್ಯಕ್ಷರಿಂದಾಗಲಿ ಅದಕ್ಕೆ ನಾನು ಕೈಜೋಡಿಸುತ್ತೇನೆ. ವಿಜಯ ಬ್ಯಾಂಕ್ ಸ್ಥಾಪಕರಾದ ಮುಲ್ಕಿ ಸುಂದ ರಾಮ್ ಶೆಟ್ಟಿ ಹೆಸರಿನಲ್ಲಿ ಆರಂಭಿಸಿರುವ ಟ್ರಸ್ಟ್ ಚೇರ್‍ಮೆನ್ ಆಗಿದ್ದು, ಮುಲ್ಕಿಯಲ್ಲಿ ಅವರ ಸ್ಮಾರಕ ಭವನದಲ್ಲಿ ಸಂಗ್ರಹ ವಾಗುವ ಮೊತ್ತದಲ್ಲಿ ಮುಂದಿನ ದಿನಗಳಲ್ಲಿ ಕಾಪು, ಪಡುಬಿದ್ರೆ ಹಾಗೂ ಮುಲ್ಕಿ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸಹಾಯ ನೀಡುವ ಯೋಜನೆ ಬಗ್ಗೆ ಟ್ರಸ್ಟ್‌ನ ಇತರರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರು ಸದಾನಂದ ಕುಡ್ಡು ಶೆಟ್ಟಿ ಸಂಕೀರ್ಣ ಉದ್ಘಾಟಿಸಿದರು. ವಿವಿಧ ಫಲಾನುಭವಿಗಳಿಗೆ ಆರ್ಥಿಕ ಸಹಾಯ ನಿತರಿಸಿದರು.

ಭದ್ರತಾ ಕೊಠಡಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಸಿರಿಮುಡಿ ಉಳಿತಾಯ ಖಾತೆ ಪಾಸ್ ಪುಸ್ತಕವನ್ನು ಹೇರಂಭಾ ಗ್ರೂಪ್ ಆಡಳಿತ ನಿರ್ದೇಶಕ ಡಾ.ಕನ್ಯಾನ ಸದಾಶಿವ ಶೆಟ್ಟಿ ವಿತರಿಸಿದರು. ನಿರಖು ಠೇವಣಿ ಪತ್ರವನ್ನು ವಿ.ಕೆ.ಗ್ರೂಪ್ ಆಡಳಿತ ನಿರ್ದೇಶಕ ಕೆ.ಎಮ್.ಶೆಟ್ಟಿ ಬಿಡುಗಡೆಗೊಳಿಸಿದರು. ನಾನಾ ಸವಲತ್ತು ಗಳನ್ನು ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್ ಹೆಗ್ಡೆ ವಿತರಿಸಿದರು.

ಸನ್ಮಾನ: ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಮತ್ತು ಪುಣೆ ಉದ್ಯಮಿ ಕಲಾಯಿಬೆಟ್ಟು ಶಂಕರಿ ನಿವಾಸದ ಸದಾನಂದ ಕೆ.ಶೆಟ್ಟಿಯವರನ್ನು ಪಡುಬಿದ್ರೆ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾ ಯಿತು. ಬಂಟಾಶ್ರಯ ಯೋಜನೆಗೆ 5 ಲಕ್ಷ ರೂ.ದೇಣಿಗೆ ನೀಡಿದ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ದಂಪತಿಯನ್ನು ಗೌರವಿಸಲಾಯಿತು. ನಾನಾ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಪಡುಬಿದ್ರೆ ಬಂಟರ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಪಡುಬಿದ್ರೆ ಬಂಟರ ಸಂಘದ ವತಿಯಿಂದ 2026 ಜನವರಿ 18ರಂದು ಪಡುಬಿದ್ರೆಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಂಟ ಕಲೋತ್ಸವ "ತುಳುವ ಐಸಿರಿ-2026"ರ ಕರಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.

ಅಶಕ್ತರಿಗೆ, ವಿಶಿಷ್ಟಚೇತನರಿಗೆ, ಅನಾರೋಗ್ಯ ಪೀಡಿತರಿಗೆ, ವಿಧವೆಯರಿಗೆ, ಮನೆ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು. ಸಿರಿಮುಡಿ ದತ್ತಿನಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿ ಒಟ್ಟು ರೂ.17 ಲಕ್ಷ ಸಹಾಯಧನ ವಿತರಿಸಲಾಯಿತು.

ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ವೈ.ಎನ್.ಶೆಟ್ಟಿ, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಭಾರತಿ ಬಿ.ಶೆಟ್ಟಿ, ಯುವ ಬಂಟರ ವಿಭಾಗದ ಅಧ್ಯಕ್ಷ ಸುಜಿತ್ ಶೆಟ್ಟಿ, ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಶ್ರೀನಾಥ್ ಹೆಗ್ಡೆ, ನಿರ್ದೇಶಕರಾದ ವೈ.ಶಶಿಧರ್ ಶೆಟ್ಟಿ, ರವೀಂದ್ರನಾಥ ಜಿ.ಹೆಗ್ಡೆ, ಸುರೇಶ್ ಶೆಟ್ಟಿ ಗುಂಡ್ಲಾಡಿ, ನವೀನ್‍ಚಂದ್ರ ಜೆ.ಶೆಟ್ಟಿ, ಸಂತೋಷ್ ಶೆಟ್ಟಿ ಪಲ್ಲವಿ, ಮಾಧವ ಸಿ.ಶೆಟ್ಟಿ, ಶೋಭಾ ಜೆ.ಶೆಟ್ಟಿ ಉಪಸ್ಥಿತರಿದ್ದರು.

ಬಂಟರ ಸಂಘದ ಸಿರಿಮುಡಿ ದತ್ತಿನಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಜಯ ಶೆಟ್ಟಿ ಪದ್ರ ಮತ್ತು ವಿತಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಂಟರ ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X